ಪುತ್ತೂರು: ಕಾರ್ಯಕ್ರಮವೊಂದರ ಬಳಿಕ ಮನೆಗೆ ತೆರಳುತ್ತಿದ್ದ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಹಿನ್ನೆಲೆಯಲ್ಲಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆಗಸ್ಟ್ 23ರ ರಾತ್ರಿ ಕಾರ್ಯಕ್ರಮ ಮುಗಿದ ಬಳಿಕ ಬಾಲಕಿಯನ್ನು ಮನೆಗೆ ಸುರಕ್ಷಿತವಾಗಿ ತಲುಪಿಸುವುದಾಗಿ ಹೇಳಿ ಆರೋಪಿತ ಅದ್ದು ಪಡೀಲ್ ಎಂಬಾತ ದ್ವಿಚಕ್ರ ವಾಹನದಲ್ಲಿ ಕರೆದೊಯ್ದಿದ್ದಾನೆ ಎನ್ನಲಾಗಿದೆ. ಮನೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಿ ಬಾಲಕಿಯ ತಾಯಿ ಪೊಲೀಸರಿಗೆ ದೂರು ನೀಡಿದ್ದಾರೆ.
ದೂರಿನ ಆಧಾರದ ಮೇಲೆ ಪೊಲೀಸರು ಅ.ಕ್ರ. 46/2026ರಂತೆ ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್) 2023ರ ಕಲಂ 75 ಹಾಗೂ ಪೋಕೋ ಕಾಯ್ದೆಯ ಕಲಂ 8 ಮತ್ತು 12ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಮುಂದುವರಿಸಿರುವ ಪೊಲೀಸರು, ಘಟನೆಯ ಕುರಿತು ಹೆಚ್ಚಿನ ಮಾಹಿತಿ ಹಾಗೂ ಸಾಕ್ಷ್ಯಗಳನ್ನು ಸಂಗ್ರಹಿಸುವ ಕಾರ್ಯ ನಡೆಸುತ್ತಿದ್ದಾರೆ.





