ವಿಟ್ಲ: ಈಜಲು ತೆರಳಿದ್ದ ಯುವಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಕೋಟಿಕೆರೆ ಪ್ರದೇಶದಲ್ಲಿ ಬೆಳಗಿನ ಜಾವ ನಡೆದಿದೆ.
ಮೃತರನ್ನು ವಿಟ್ಲ ಕಸಬಾ ವ್ಯಾಪ್ತಿಯ ಗಾಳಿಹಿತ್ತು ನಿವಾಸಿ ವೀರಪ್ಪ ಗೌಡ ಅವರ ಪುತ್ರ ಹಾಗೂ ಎಸ್‌ಸಿಡಿಸಿಸಿ ಬ್ಯಾಂಕ್‌ನಲ್ಲಿ ಉದ್ಯೋಗಿಯಾಗಿದ್ದ ಲಿತಿನ್ (32) ಎಂದು ಗುರುತಿಸಲಾಗಿದೆ.
ಬೆಳಗ್ಗೆ ಈ ಘಟನೆ ಸಂಭವಿಸಿದ್ದು, ಮಾಹಿತಿ ತಿಳಿದ ಸ್ಥಳೀಯರು ತಕ್ಷಣವೇ ಯುವಕನನ್ನು ನೀರಿನಿಂದ ಹೊರತೆಗೆದಿದ್ದಾರೆ. ಆದರೆ ಅಷ್ಟರಲ್ಲಾಗಲೇ ಅವರು ಮೃತಪಟ್ಟಿದ್ದರು ಎಂದು ತಿಳಿದುಬಂದಿದೆ.
ಲಿತಿನ್ ಅವರು ತಂದೆ, ತಾಯಿ, ಪತ್ನಿ ಹಾಗೂ ಮಗುವನ್ನು ಅಗಲಿದ್ದಾರೆ.





