ಮಂಗಳೂರು: ರಾಕಿಂಗ್ ಸ್ಟಾರ್ ಯಶ್ ಅವರು ಮಂಗಳವಾರ ಮಂಗಳೂರಿಗೆ ಆಗಮಿಸಿದರು. ಚೆನ್ನೈನಿಂದ ವಿಶೇಷ ವಿಮಾನದ ಮೂಲಕ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ನಟ ಯಶ್ ಅವರನ್ನು ಅಭಿಮಾನಿಗಳು ಉತ್ಸಾಹದಿಂದ ಬರಮಾಡಿಕೊಂಡರು.
ವಿಮಾನ ನಿಲ್ದಾಣದಿಂದ ಯಶ್ ಅವರು ನೇರವಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದತ್ತ ತೆರಳಿದರು. ಅಲ್ಲಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ತಮ್ಮ ಬಹುನಿರೀಕ್ಷಿತ ‘Toxic: A Fairy Tale for Grown-Ups’ ಚಿತ್ರದ ಯಶಸ್ಸಿಗಾಗಿ ಅವರು ಪ್ರಾರ್ಥನೆ ಸಲ್ಲಿಸಿದ್ದಾರೆ.
ಯಶ್ ಅಭಿನಯದ ‘Toxic’ ಚಿತ್ರವು ಆಗಸ್ಟ್ 26ರಂದು ವಿಶ್ವದಾದ್ಯಂತ ತೆರೆಗೆ ಬರಲು ಸಿದ್ಧವಾಗಿದೆ. ಚಿತ್ರದ ಬಿಡುಗಡೆಗೆ ಮುನ್ನ ಧರ್ಮಸ್ಥಳಕ್ಕೆ ಯಶ್ ಭೇಟಿ ನೀಡಿರುವುದು ಅಭಿಮಾನಿಗಳ ಗಮನ ಸೆಳೆದಿದೆ.





