ಬೆಳ್ತಂಗಡಿ: 13 ವರ್ಷಗಳ ಹಿಂದೆ ಅತ್ಯಾಚಾರಕ್ಕೊಳಗಾಗಿ ಹತ್ಯೆಯಾಗಿದ್ದ ಉಜಿರೆಯ ಎಸ್‌ಡಿಎಂ ಕಾಲೇಜಿನ ವಿದ್ಯಾರ್ಥಿನಿ ಕು. ಸೌಜನ್ಯ ಅವರ ಧರ್ಮಸ್ಥಳ ಗ್ರಾಮದ ಪಾಂಗಳ ನಿವಾಸಕ್ಕೆ ಆರ್‌ಎಸ್‌ಎಸ್‌ನ ಹಿರಿಯ ಮುಖಂಡ ಡಾ. ಪ್ರಭಾಕರ ಭಟ್ ಕಲ್ಲಡ್ಕ ಅವರು ಆಗಸ್ಟ್ 26ರಂದು ಭೇಟಿ ನೀಡಿದರು.
ಈ ವೇಳೆ ಸೌಜನ್ಯ ಅವರ ತಾಯಿ ಕುಸುಮಾವತಿ ಚಂದಪ್ಪ ಗೌಡ ಅವರೊಂದಿಗೆ ಡಾ. ಪ್ರಭಾಕರ ಭಟ್ ಅವರು ಮಾತುಕತೆ ನಡೆಸಿದರು.
ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿದ ಹಲವು ವಿಚಾರಗಳ ಕುರಿತು ಈ ಸಂದರ್ಭದಲ್ಲಿ ಚರ್ಚೆ ನಡೆದಿದೆ ಎಂದು ತಿಳಿದುಬಂದಿದೆ.





