29 August 2026 |

ದಕ್ಷಿಣ ಕನ್ನಡದಲ್ಲಿ H1N1 ಹೆಚ್ಚಳ: 87 ಪ್ರಕರಣ ಪತ್ತೆ

  • 28 Aug 2026 03:53:25 PM

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ H1N1 ಪ್ರಕರಣಗಳ ಸಂಖ್ಯೆ ಹೆಚ್ಚಾಗಿದ್ದು, ಇದುವರೆಗೆ 87 ಪ್ರಕರಣಗಳು ಪತ್ತೆಯಾಗಿವೆ. ಈ ಪೈಕಿ ಮಂಗಳೂರು ತಾಲೂಕೊಂದರಲ್ಲೇ 60 ಪ್ರಕರಣಗಳು ದಾಖಲಾಗಿವೆ.

 

ಪ್ರಕರಣಗಳ ಹೆಚ್ಚಳದ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಪರಿಸ್ಥಿತಿಯ ಮೇಲೆ ನಿಗಾ ವಹಿಸಿದ್ದು, ಸಾರ್ವಜನಿಕರು ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸುವಂತೆ ಸೂಚಿಸಲಾಗಿದೆ. 

 

ಜ್ವರ, ಕೆಮ್ಮು, ಗಂಟಲು ನೋವು, ಶೀತ ಅಥವಾ ಉಸಿರಾಟದ ತೊಂದರೆ ಕಾಣಿಸಿಕೊಂಡರೆ ನಿರ್ಲಕ್ಷ್ಯ ಮಾಡದೆ ವೈದ್ಯರನ್ನು ಸಂಪರ್ಕಿಸುವಂತೆ ಸಲಹೆ ನೀಡಲಾಗಿದೆ.

 

ಕೈಗಳನ್ನು ಸ್ವಚ್ಛವಾಗಿ ತೊಳೆಯುವುದು, ಕೆಮ್ಮುವಾಗ ಅಥವಾ ಸೀನುವಾಗ ಬಾಯಿ ಮುಚ್ಚಿಕೊಳ್ಳುವುದು ಹಾಗೂ ಅನಾರೋಗ್ಯದ ಸಂದರ್ಭದಲ್ಲಿ ಜನಸಂದಣಿಯಿಂದ ದೂರವಿರುವುದು ಸೋಂಕಿನ ಹರಡುವಿಕೆ ತಡೆಯಲು ಸಹಾಯಕವಾಗಲಿದೆ.