ಮಂಗಳೂರು: ರಾಜ್ಯ ಸರ್ಕಾರವು ಹಲವು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದು, ಕರಾವಳಿ ಭಾಗದ ಇಬ್ಬರು ಹಿರಿಯ ಪೊಲೀಸ್ ಅಧಿಕಾರಿಗಳಿಗೂ ವರ್ಗಾವಣೆ ನೀಡಲಾಗಿದೆ.
ಪಶ್ಚಿಮ ವಲಯದ ಐಜಿಪಿಯಾಗಿದ್ದ ಅಮಿತ್ ಸಿಂಗ್ ಅವರನ್ನು ಕರ್ನಾಟಕ ರಾಜ್ಯ ಮೀಸಲು ಪೊಲೀಸ್ ಪಡೆಯ ಐಜಿಪಿ ಹುದ್ದೆಗೆ ವರ್ಗಾಯಿಸಲಾಗಿದೆ. ಅವರ ಸ್ಥಾನಕ್ಕೆ ಈ ಹಿಂದೆ ಹುದ್ದೆಯ ನಿರೀಕ್ಷೆಯಲ್ಲಿದ್ದ ಆರ್. ಚೇತನ್ ಅವರನ್ನು ನೇಮಕ ಮಾಡಲಾಗಿದೆ.
ಇದೇ ವೇಳೆ, ಮಂಗಳೂರು ನಗರ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿಯಾಗಿದ್ದ ಮಿಥುನ್ ಎಚ್.ಎನ್. ಅವರನ್ನು ಗದಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ನೇಮಕಗೊಳಿಸಲಾಗಿದೆ.
ಮಿಥುನ್ ಎಚ್.ಎನ್. ಅವರ ವರ್ಗಾವಣೆಯಿಂದ ಮಂಗಳೂರು ನಗರ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿ ಹುದ್ದೆ ಸದ್ಯ ಖಾಲಿಯಾಗಿದ್ದು, ಆ ಸ್ಥಾನಕ್ಕೆ ಸರ್ಕಾರ ಯಾವುದೇ ಅಧಿಕಾರಿಯನ್ನು ನೇಮಕ ಮಾಡಿಲ್ಲ.





