31 August 2026 |

9ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು; ಕುಟುಂಬಸ್ಥರಲ್ಲಿ ಆಘಾತ

  • 31 Aug 2026 02:24:04 PM

ಬೆಳ್ತಂಗಡಿ: ತಾಲೂಕಿನ ಬಂದಾರು ಗ್ರಾಮದ ಬೈಪಾಡಿ ಕುರಿಯಾಳ ನಿವಾಸಿ ಭರತ್ ಗೌಡ ಅವರ ಪುತ್ರ, 14 ವರ್ಷದ ಶ್ರವಣ್ ಬಿ.ಕೆ. ಆತ್ಮಹತ್ಯೆಗೆ ಶರಣಾದ ದುರ್ಘಟನೆ ಆ.30ರಂದು ನಡೆದಿದೆ.

 

ಶ್ರವಣ್ ಬೆಳ್ತಂಗಡಿಯ ಖಾಸಗಿ ಪ್ರೌಢಶಾಲೆಯಲ್ಲಿ 9ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ. ಆ.29ರಂದು ಕುಟುಂಬದವರೊಂದಿಗೆ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದ ಬಾಲಕ, ಮರುದಿನ ಮನೆಯಲ್ಲಿ ಆತ್ಮಹತ್ಯೆಗೆ ಶರಣಾಗಿರುವುದು ಕುಟುಂಬಸ್ಥರಿಗೆ ಆಘಾತ ಉಂಟುಮಾಡಿದೆ.

 

ಬಾಲಕನ ಅಕಾಲಿಕ ನಿಧನದಿಂದ ಕುಟುಂಬ ಹಾಗೂ ಸ್ಥಳೀಯರಲ್ಲಿ ದುಃಖದ ವಾತಾವರಣ ನಿರ್ಮಾಣವಾಗಿದೆ. ಶ್ರವಣ್ ತಂದೆ, ತಾಯಿ ಮತ್ತು ಸಹೋದರಿಯನ್ನು ಅಗಲಿದ್ದಾನೆ.

 

ಆತ್ಮಹತ್ಯೆಗೆ ಕಾರಣವೇನು ಎಂಬುದು ಸದ್ಯಕ್ಕೆ ತಿಳಿದುಬಂದಿಲ್ಲ. ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.