02 September 2026 |

ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ತೆರಳುವ ಭಕ್ತರಿಗೆ ಮಹತ್ವದ ಮಾಹಿತಿ

  • 01 Sep 2026 08:17:16 PM

ಮಂಗಳೂರು: ಪ್ರಸಿದ್ಧ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸೆಪ್ಟೆಂಬರ್ ಮೊದಲ ವಾರದಲ್ಲಿ ಕೆಲವು ಸೇವೆಗಳಲ್ಲಿ ಬದಲಾವಣೆ ಮಾಡಲಾಗಿದೆ. ಸೆಪ್ಟೆಂಬರ್ 3, 4, 6 ಮತ್ತು 7ರಂದು ವಿಶೇಷ ಸೇವೆಗಳು ನಡೆಯುವುದಿಲ್ಲ ಎಂದು ದೇವಸ್ಥಾನದ ಪ್ರಕಟಣೆ ತಿಳಿಸಿದೆ.

 

ಅದೇ ರೀತಿ ಸೆಪ್ಟೆಂಬರ್ 4 ಮತ್ತು 7ರಂದು ಸರ್ಪ ಸಂಸ್ಕಾರ ಸೇರಿದಂತೆ ಕೆಲವು ಪ್ರಮುಖ ಸೇವೆಗಳು ಲಭ್ಯವಿರುವುದಿಲ್ಲ. ಈ ಹಿನ್ನೆಲೆಯಲ್ಲಿ ಈ ದಿನಗಳಲ್ಲಿ ದೇವಸ್ಥಾನಕ್ಕೆ ಆಗಮಿಸುವ ಭಕ್ತರು ಮುಂಚಿತವಾಗಿ ಮಾಹಿತಿ ಪಡೆದುಕೊಳ್ಳುವಂತೆ ಸೂಚಿಸಲಾಗಿದೆ.

 

ಸೇವೆಗಳ ಬದಲಾವಣೆಯಿಂದಾಗಿ ಭಕ್ತರು ಅನಗತ್ಯ ತೊಂದರೆಗೆ ಒಳಗಾಗದಂತೆ ದೇವಸ್ಥಾನದ ಸೂಚನೆಗಳನ್ನು ಪಾಲಿಸುವಂತೆ ಮನವಿ ಮಾಡಲಾಗಿದೆ.

 

ಹೀಗಾಗಿ, ಸೆಪ್ಟೆಂಬರ್ 3ರಿಂದ 7ರವರೆಗೆ ಕುಕ್ಕೆ ಕ್ಷೇತ್ರಕ್ಕೆ ಭೇಟಿ ನೀಡುವ ಭಕ್ತರು ಸೇವೆಗಳ ಲಭ್ಯತೆಯನ್ನು ಗಮನದಲ್ಲಿಟ್ಟುಕೊಂಡು ತಮ್ಮ ಪ್ರವಾಸವನ್ನು ಯೋಜಿಸುವುದು ಸೂಕ್ತ.