20 September 2026 |

ಪಣಕಜೆ ರಸ್ತೆ ಅಪಘಾತ: ಚಿಕಿತ್ಸೆ ಫಲಿಸದೆ ಯುವಕ ಸಾವು

  • 02 Sep 2026 12:04:52 PM

ಬೆಳ್ತಂಗಡಿ: ಪಣಕಜೆ ಮಸೀದಿ ಸಮೀಪ ಸೆಪ್ಟೆಂಬರ್ 1ರಂದು ನಡೆದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

 

ಮೃತರನ್ನು ಉಜಿರೆ ನಿವಾಸಿ ರಿನ್ಸ್ ಶಿಬಿ (24) ಎಂದು ಗುರುತಿಸಲಾಗಿದೆ. ಸೆಪ್ಟೆಂಬರ್ 1ರ ಸಂಜೆ ಪಣಕಜೆ ಬಳಿ ರಿನ್ಸ್ ಶಿಬಿ ಅವರು ಚಲಾಯಿಸುತ್ತಿದ್ದ ಬೈಕ್ ಟೆಂಪೋದ ಹಿಂಭಾಗಕ್ಕೆ ಡಿಕ್ಕಿ ಹೊಡೆದಿತ್ತು. ಅಪಘಾತದ ತೀವ್ರತೆಗೆ ಅವರು ಬೈಕ್‌ನಿಂದ ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡಿದ್ದರು.

 

ಅಪಘಾತದ ಬಳಿಕ ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೆ ರಿನ್ಸ್ ಶಿಬಿ ಮೃತಪಟ್ಟಿದ್ದಾರೆ.

 

ಘಟನೆಗೆ ಸಂಬಂಧಿಸಿದಂತೆ ಪೂಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.