ಬೆಂಗಳೂರು: ಪ್ರಕಾಶ್ ರಾಜ್ ಅವರು ಬೆಂಗಳೂರಿನಲ್ಲಿ ನಡೆದ “Election Commission Chalo” ಪ್ರತಿಭಟನೆಯಲ್ಲಿ ಭಾಗವಹಿಸಿ SIR (Special Intensive Revision) ಹಾಗೂ ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕಲಾಗುತ್ತಿದೆ ಎಂಬ ಆರೋಪಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆಯ ವೇಳೆ ಅವರನ್ನು ಪೊಲೀಸರು ಕೆಲಕಾಲ ವಶಕ್ಕೆ ಪಡೆದರು ಎನ್ನಲಾಗಿದೆ.
ಆದರೆ, ಇದೇ ಸಂದರ್ಭದಲ್ಲಿ ಪ್ರಕಾಶ್ ರಾಜ್ ವಿರುದ್ಧ ಇರುವ ಮತದಾರರ ಗುರುತಿನ ಚೀಟಿಗೆ ಸಂಬಂಧಿಸಿದ ಪ್ರಕರಣವೂ ಮತ್ತೆ ಚರ್ಚೆಗೆ ಬಂದಿದೆ.
ಅವರ ಹೆಸರಿನಲ್ಲಿ ಒಂದಕ್ಕಿಂತ ಹೆಚ್ಚು ಮತದಾರರ ಗುರುತಿನ ಚೀಟಿಗಳು ಇದ್ದವು ಎಂಬ ಆರೋಪಕ್ಕೆ ಸಂಬಂಧಿಸಿದ ಪ್ರಕರಣ ಅವರ ವಿರುದ್ಧ ದಾಖಲಾಗಿದ್ದು, ಈ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ “ವೋಟರ್ ಡಿಲೀಷನ್ ವಿರುದ್ಧ ಹೋರಾಡುತ್ತಿರುವವರೇ ಬಹು ವೋಟರ್ ಐಡಿ ಪ್ರಕರಣ ಎದುರಿಸುತ್ತಿದ್ದಾರೆ” ಎಂಬ ಟೀಕೆಗಳು ಕೇಳಿಬರುತ್ತಿವೆ.





