04 September 2026 |

ಬ್ಲಿಂಕಿಟ್‌(Blinkit) ನಲ್ಲಿ ಮೊಟ್ಟೆಯಲ್ಲಿ ಹುಳ ಪತ್ತೆ ಆರೋಪ: ಮಂಗಳೂರಿನಲ್ಲಿ ಆಹಾರ ಸುರಕ್ಷತಾ ಅಧಿಕಾರಿಗಳ ದಾಳಿ

  • 04 Sep 2026 09:22:40 AM

ಮಂಗಳೂರು: ಫಳ್ನೀರ್‌ನಲ್ಲಿರುವ ಬ್ಲಿಂಕಿಟ್ ಮಳಿಗೆಯಲ್ಲಿ ಆನ್‌ಲೈನ್ ಮೂಲಕ ಖರೀದಿಸಿದ ಮೊಟ್ಟೆಯಲ್ಲಿ ಹುಳ ಪತ್ತೆಯಾಗಿದೆ ಎಂಬ ಗ್ರಾಹಕರ ದೂರಿನ ಹಿನ್ನೆಲೆಯಲ್ಲಿ ಆಹಾರ ಸುರಕ್ಷತಾ ಅಧಿಕಾರಿಗಳು ಪರಿಶೀಲನೆ ನಡೆಸಿದರು.

 

ತಪಾಸಣೆ ವೇಳೆ ಒಡೆದ ಮೊಟ್ಟೆಗಳಿದ್ದ ಪ್ಯಾಕೆಟ್‌ಗಳು ಪತ್ತೆಯಾಗಿದ್ದು, ಅವುಗಳನ್ನು ತೆರವುಗೊಳಿಸುವಂತೆ ಅಧಿಕಾರಿಗಳು ಸೂಚಿಸಿದ್ದಾರೆ. ಅಲ್ಲದೆ, ಮೊಟ್ಟೆಗಳನ್ನು ಸಂಗ್ರಹಿಸುವ ಕೊಠಡಿಯನ್ನು ತಾತ್ಕಾಲಿಕವಾಗಿ ಸೀಲ್ ಮಾಡಲು ನಿರ್ಧರಿಸಲಾಗಿದೆ.

 

ಪ್ರಕರಣಕ್ಕೆ ಸಂಬಂಧಿಸಿದಂತೆ ಬ್ಲಿಂಕಿಟ್ ಸಂಸ್ಥೆಗೆ ನೋಟಿಸ್ ಜಾರಿಗೊಳಿಸುವ ಸಾಧ್ಯತೆ ಇದೆ. ಅಧಿಕಾರಿಗಳ ಮುಂದಿನ ಕ್ರಮದ ಬಳಿಕ ಪ್ರಕರಣದ ಸಂಪೂರ್ಣ ಮಾಹಿತಿ ಲಭ್ಯವಾಗಲಿದೆ.