20 September 2026 |

ಪುತ್ತೂರು: ಜಿಮ್‌ನಲ್ಲಿ ವರ್ಕ್‌ಔಟ್ ಮಾಡುತ್ತಿದ್ದ ವಿದ್ಯಾರ್ಥಿ ಸಾವು

  • 05 Sep 2026 09:42:54 PM

ಪುತ್ತೂರು: ಜಿಮ್‌ನಲ್ಲಿ ವರ್ಕ್‌ಔಟ್ ಮಾಡುತ್ತಿದ್ದ ವಿದ್ಯಾರ್ಥಿಯೊಬ್ಬರು ಏಕಾಏಕಿ ಎದೆ ನೋವಿನಿಂದ ಬಳಲಿದ ಬಳಿಕ ಮೃತಪಟ್ಟ ಘಟನೆ ಪುತ್ತೂರಿನಲ್ಲಿ ನಡೆದಿದೆ.

 

ಮೃತರನ್ನು ಕುಂಜೂರುಪಂಜ ನಿವಾಸಿ ಶ್ರಮಿಕ್ ರೈ (20) ಎಂದು ಗುರುತಿಸಲಾಗಿದೆ.

 

ಶ್ರಮಿಕ್ ರೈ ಅವರು ಜಿಮ್‌ನಲ್ಲಿ ವರ್ಕ್‌ಔಟ್ ಮಾಡುತ್ತಿದ್ದ ವೇಳೆ ಎದೆ ನೋವು ಕಾಣಿಸಿಕೊಂಡಿದೆ ಎನ್ನಲಾಗಿದೆ. ಬಳಿಕ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ತಕ್ಷಣವೇ ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

 

ಯುವ ವಿದ್ಯಾರ್ಥಿಯ ಅಕಾಲಿಕ ಸಾವಿನಿಂದ ಕುಟುಂಬಸ್ಥರು, ಸ್ನೇಹಿತರು ಹಾಗೂ ಸ್ಥಳೀಯರಲ್ಲಿ ಆಘಾತ ಮೂಡಿದೆ.

 

ಮರಣಕ್ಕೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ವೈದ್ಯಕೀಯ ಪರೀಕ್ಷೆ ಹಾಗೂ ಸಂಬಂಧಿತ ಪ್ರಕ್ರಿಯೆಗಳ ಬಳಿಕ ಸಾವಿನ ನಿಖರ ಕಾರಣ ತಿಳಿದುಬರಬೇಕಿದೆ.