'ಆಪರೇಷನ್ ಸಿಂಧೂರ್' ಹೆಸರಿನಲ್ಲಿ ಪಾಕಿಸ್ತಾನದ 9 ಭಯೋತ್ಪಾದಕ ಕೇಂದ್ರಗಳಿಗೆ ಭಾರತ ದಾಳಿ! - ಪಾಕಿಸ್ತಾನದಲ್ಲಿ ಅಲ್ಲೋಲ ಕಲ್ಲೋಲ

  • 07 May 2025 09:25:55 AM

ದೆಹಲಿ, ಮೇ 07:  ಏಪ್ರಿಲ್ 22 ರಂದು ಜಮ್ಮು ಮತ್ತು ಕಾಶ್ಮೀರದ ಅನಂತ್‌ನಾಗ್ ಜಿಲ್ಲೆಯ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಪ್ರತಿಯಾಗಿ ಬೆಳಗಿನ ಜಾವ 1:44 ಕ್ಕೆ ಭಾರತೀಯ ಸೇನೆ ಪಾಕಿಸ್ತಾನದ ಭಯೋತ್ಪಾದಕರ ನೆಲೆಗಳಿಗೆ ದಾಳಿ ನಡೆಸಿದೆ.

 

ಬುಧವಾರ ಮುಂಜಾನೆ ಭಾರತೀಯ ಸಶಸ್ತ್ರ ಪಡೆಗಳು ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿನ ಒಂಬತ್ತು ಭಯೋತ್ಪಾದಕ ಗುರಿಗಳ ಮೇಲೆ ಕ್ಷಿಪಣಿ ದಾಳಿ ನಡೆಸಿದೆ.

 

ಭಯೋತ್ಪಾದಕರನ್ನು ತಯಾರಿಸುವ ಪ್ರಮುಖ ಕೇಂದ್ರಗಳಾದ ಮುರಿಡ್ಕೆ ಮತ್ತು ಬಹಾವಲ್ಪುರ್ ಸೇರಿವೆ. ಇವುಗಳು ಕ್ರಮವಾಗಿ ಲಷ್ಕರ್-ಎ-ತೈಬಾ ಮತ್ತು ಜೈಶ್-ಎ-ಮೊಹಮ್ಮದ್ ಭಯೋತ್ಪಾದಕ ಗುಂಪುಗಳ ಭದ್ರಕೋಟೆಗಳಾಗಿದ್ದವು.

 

ಭಾರತ ಪಾಕಿಸ್ತಾನದ ಯಾವುದೇ ಪಾಕಿಸ್ತಾನಿ ಮಿಲಿಟರಿ ಸೌಲಭ್ಯಗಳನ್ನು ಗುರಿಯಾಗಿಸಿಕೊಂಡಿಲ್ಲ. ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಜಮ್ಮು ಮತ್ತು ಕಾಶ್ಮೀರದಲ್ಲಿನ ಭಯೋತ್ಪಾದಕ ಮೂಲಸೌಕರ್ಯಗಳ ಮೇಲೆ ದಾಳಿ ನಡೆಸಲಾಗಿದೆ ಎಂದು ಭಾರತ ರಕ್ಷಣಾ ಸಚಿವಾಲಯ ದೃಢಪಡಿಸಿದೆ.

 

ಇವತ್ತು ದೇಶದಾದ್ಯಂತ 244 ಜಿಲ್ಲೆಗಳಲ್ಲಿ "ಪ್ರತಿಕೂಲ ದಾಳಿಯ ಸಂದರ್ಭದಲ್ಲಿ ಪರಿಣಾಮಕಾರಿ ನಾಗರಿಕ ರಕ್ಷಣೆ" ಯ ಅಡಿಯಲ್ಲಿ ಸೆಕ್ಯೂರಿಟಿ ಡ್ರಿಲ್ ನಡೆಯಲಿದೆ.

 

ಪ್ರಧಾನಿ ನರೇಂದ್ರ ಮೋದಿ ಅವರು ದಾಳಿಯ ಅಪರಾಧಿಗಳನ್ನು ಮತ್ತು ಅದರ ಪಿತೂರಿಯಲ್ಲಿ ಭಾಗವಹಿಸಿದವರನ್ನು "ಅವರ ಕಲ್ಪನೆಗೂ ಮೀರಿದ" ಶಿಕ್ಷೆಯನ್ನು ವಿಧಿಸಲು "ಭೂಮಿಯ ತುದಿಯವರೆಗೆ" ಹಿಂಬಾಲಿಸುವುದಾಗಿ ಪ್ರತಿಜ್ಞೆ ಮಾಡಿದ್ದರು.