ವಿಟ್ಲ: ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಟ್ಲದಲ್ಲಿ ನಡೆದಿದೆ.
ಮೃತರನ್ನು ವೀರಕಂಬ ನಿವಾಸಿ ಹರೀಶ್ ಎಸ್.ಟಿ. (48) ಎಂದು ಗುರುತಿಸಲಾಗಿದೆ. ಅವರು ತಮ್ಮ ನಿವಾಸದಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎನ್ನಲಾಗಿದೆ.
ಘಟನೆಯ ಮಾಹಿತಿ ದೊರೆತ ಕೂಡಲೇ ವಿಟ್ಲ ಠಾಣಾ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಮೃತದೇಹವನ್ನು ಮುಂದಿನ ಕಾನೂನು ಪ್ರಕ್ರಿಯೆಗಾಗಿ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ತಿಳಿದುಬಂದಿದೆ.
ಹರೀಶ್ ಅವರು ಆತ್ಮಹತ್ಯೆ ಮಾಡಿಕೊಳ್ಳಲು ಕಾರಣವೇನು ಎಂಬುದು ಸದ್ಯಕ್ಕೆ ತಿಳಿದುಬಂದಿಲ್ಲ. ಈ ಕುರಿತು ವಿಟ್ಲ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಪೊಲೀಸರ ತನಿಖೆಯ ಬಳಿಕವೇ ಘಟನೆಯ ಹಿಂದಿರುವ ನಿಖರ ಕಾರಣದ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.





