ಮಂಗಳೂರು: ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರಿಗೆ ಎಸ್‌ಐಆರ್ (Special Intensive Revision) ಪ್ರಕ್ರಿಯೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದಿಂದ ನೋಟಿಸ್ ಜಾರಿಯಾಗಿರುವುದು ತಿಳಿದುಬಂದಿದೆ.
2002ರ ಮತದಾರರ ಪಟ್ಟಿಯಲ್ಲಿ ಹರೇಕಳ ಹಾಜಬ್ಬ ಅವರ ಹೆಸರು ‘ಹಾಜಬ್ಬ’ ಎಂದು ಮಾತ್ರ ದಾಖಲಾಗಿತ್ತು ಎನ್ನಲಾಗಿದೆ. ಆದರೆ ಪ್ರಸ್ತುತ ಅವರ ರೇಷನ್ ಕಾರ್ಡ್, ಆಧಾರ್ ಕಾರ್ಡ್, ಪಾಸ್‌ಪೋರ್ಟ್ ಹಾಗೂ ಮತದಾರರ ಗುರುತಿನ ಚೀಟಿಯಲ್ಲಿ ‘ಹರೇಕಳ ಹಾಜಬ್ಬ’ ಎಂದು ಹೆಸರು ನಮೂದಿಸಲಾಗಿದೆ.
ಹಳೆಯ ಮತದಾರರ ಪಟ್ಟಿಯಲ್ಲಿನ ಹೆಸರು ಮತ್ತು ಪ್ರಸ್ತುತ ದಾಖಲೆಗಳಲ್ಲಿರುವ ಹೆಸರಿನ ನಡುವೆ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆಯ ಭಾಗವಾಗಿ ಚುನಾವಣಾ ಆಯೋಗದಿಂದ ನೋಟಿಸ್ ನೀಡಲಾಗಿದೆ ಎಂದು ತಿಳಿದು ಬಂದಿದೆ.
ಹೆಸರು ಮತ್ತು ದಾಖಲೆಗಳಲ್ಲಿನ ವ್ಯತ್ಯಾಸವನ್ನು ಪರಿಶೀಲಿಸುವ ಉದ್ದೇಶದಿಂದ ಈ ನೋಟಿಸ್ ನೀಡಲಾಗಿದೆ ಎನ್ನಲಾಗಿದೆ.





