09 September 2026 |

ಗುವಾಹಟಿಯಲ್ಲಿ ಪತ್ನಿಯ ಭೀಕರ ಕೊಲೆ: ರುಂಡ, ಬೆರಳುಗಳನ್ನು ಫ್ರಿಡ್ಜ್‌ನಲ್ಲಿಟ್ಟ ಪತಿ

  • 09 Sep 2026 10:15:07 AM

ಗುವಾಹಟಿ: ಅಸ್ಸಾಂನ ಗುವಾಹಟಿಯಲ್ಲಿ ಪತ್ನಿಯನ್ನು ಕೊಲೆ ಮಾಡಿದ ಬಳಿಕ ಆಕೆಯ ರುಂಡ ಹಾಗೂ ಕೈಬೆರಳುಗಳನ್ನು ಕತ್ತರಿಸಿ ಫ್ರಿಡ್ಜ್‌ನಲ್ಲಿ ಇರಿಸಿದ್ದಾನೆ ಎನ್ನಲಾದ ಪತಿಯ ಕೃತ್ಯ ಬೆಳಕಿಗೆ ಬಂದಿದೆ.

 

ಕಳೆದ ಎರಡು ದಿನಗಳಿಂದ ಮನೆಯಿಂದ ದುರ್ವಾಸನೆ ಬರುತ್ತಿರುವುದನ್ನು ಗಮನಿಸಿದ ನೆರೆಹೊರೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಪೊಲೀಸರು ಮನೆಗೆ ತೆರಳಿ ಪರಿಶೀಲನೆ ನಡೆಸಿದಾಗ ಘಟನೆ ಪತ್ತೆಯಾಗಿದೆ.

 

ಮೃತ ಮಹಿಳೆಯನ್ನು ರಿಯಾ ತಾಲ್ಲೂಕುದಾರ್ (25) ಎಂದು ಗುರುತಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪತಿ ಪೊಲೀಸರಿಗೆ ಶರಣಾಗಿದ್ದು, ಆತನಿಂದ ಹೇಳಿಕೆ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ.

 

ಪತ್ನಿಯ ಕೊಲೆಗೆ ನಿಖರ ಕಾರಣವೇನು ಎಂಬುದನ್ನು ಪತ್ತೆಹಚ್ಚಲು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ದಂಪತಿ ಸುಮಾರು ಆರು ತಿಂಗಳ ಹಿಂದಷ್ಟೇ ವಿವಾಹವಾಗಿದ್ದರು ಎಂದು ತಿಳಿದುಬಂದಿದೆ.