ಮಂಡ್ಯ: ಜಿಲ್ಲೆಯ ನಾಗಮಂಗಲ ತಾಲೂಕಿನ ದೇವಿರಹಳ್ಳಿ ಜಂಕ್ಷನ್ ಸಮೀಪ ಬೆಂಗಳೂರು–ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಕಬ್ಬಿಣದ ಕಂಬಗಳನ್ನು ಸಾಗಿಸುತ್ತಿದ್ದ ಟ್ರ್ಯಾಕ್ಟರ್‌ನ್ನು ಬಸ್ ಓವರ್‌ಟೇಕ್ ಮಾಡಲು ಮುಂದಾದ ವೇಳೆ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಡಿಕ್ಕಿಯ ತೀವ್ರತೆಗೆ ಟ್ರ್ಯಾಕ್ಟರ್‌ನಲ್ಲಿದ್ದ ಕಬ್ಬಿಣದ ಕಂಬಗಳು ಬಸ್‌ನೊಳಗೆ ನುಗ್ಗಿದ್ದು, ಚಾಲಕನಿಗೆ ಗಂಭೀರವಾಗಿ ತಗುಲಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಘಟನೆಯಲ್ಲಿ ಬಸ್‌ನಲ್ಲಿದ್ದ ಹಲವು ಪ್ರಯಾಣಿಕರು ಗಾಯಗೊಂಡಿದ್ದು, ಕೆಲವರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ತಕ್ಷಣ ಬೆಳ್ಳೂರಿನ ಏಮ್ಸ್ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಲಾಗುತ್ತಿದೆ.
ಅಪಘಾತದ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಬೆಳ್ಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.





