11 September 2026 |

2035ರೊಳಗೆ ಭಾರತದದೇ ಬಾಹ್ಯಾಕಾಶ ನಿಲ್ದಾಣ ನಿರ್ಮಾಣದ ಗುರಿ

  • 11 Sep 2026 12:44:43 PM

ನವದೆಹಲಿ: ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತ ಮತ್ತೊಂದು ಮಹತ್ವದ ಹೆಜ್ಜೆ ಇಡಲು ಸಿದ್ಧತೆ ನಡೆಸುತ್ತಿದೆ. 2035ರ ವೇಳೆಗೆ ಭಾರತ ತನ್ನದೇ ಆದ ಬಾಹ್ಯಾಕಾಶ ನಿಲ್ದಾಣವನ್ನು ಸ್ಥಾಪಿಸುವ ಗುರಿಯನ್ನು ಹೊಂದಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.

 

ಮಾನವ ಸಹಿತ ಬಾಹ್ಯಾಕಾಶ ಯಾನ ಸೇರಿದಂತೆ ದೇಶದ ಬಾಹ್ಯಾಕಾಶ ಸಾಮರ್ಥ್ಯವನ್ನು ಮತ್ತಷ್ಟು ವಿಸ್ತರಿಸುವ ನಿಟ್ಟಿನಲ್ಲಿ ಈ ಯೋಜನೆ ಮಹತ್ವ ಪಡೆದಿದೆ. ಬಾಹ್ಯಾಕಾಶ ಸಂಶೋಧನೆ, ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರಗಳಲ್ಲಿ ಭಾರತದ ಸಾಮರ್ಥ್ಯವನ್ನು ಹೆಚ್ಚಿಸುವ ಉದ್ದೇಶದಿಂದ ಭವಿಷ್ಯದಲ್ಲಿ ಹಲವು ಮಹತ್ವದ ಯೋಜನೆಗಳನ್ನು ಕೈಗೊಳ್ಳಲಾಗುತ್ತಿದೆ.

 

ಸ್ವಂತ ಬಾಹ್ಯಾಕಾಶ ನಿಲ್ದಾಣ ನಿರ್ಮಾಣವಾದ ಬಳಿಕ ಭಾರತಕ್ಕೆ ಕಕ್ಷೆಯಲ್ಲಿ ದೀರ್ಘಾವಧಿಯ ವೈಜ್ಞಾನಿಕ ಪ್ರಯೋಗಗಳು ಮತ್ತು ಸಂಶೋಧನೆಗಳನ್ನು ನಡೆಸಲು ಹೆಚ್ಚಿನ ಅವಕಾಶ ದೊರೆಯಲಿದೆ. ಈ ಮೂಲಕ ಜಾಗತಿಕ ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಸ್ಥಾನ ಮತ್ತಷ್ಟು ಬಲಪಡಿಸುವ ನಿರೀಕ್ಷೆಯಿದೆ.

 

2035ರ ಗುರಿಯೊಂದಿಗೆ ಭಾರತವು ಬಾಹ್ಯಾಕಾಶ ಕ್ಷೇತ್ರದಲ್ಲಿ ದೀರ್ಘಾವಧಿಯ ಯೋಜನೆಗಳನ್ನು ರೂಪಿಸುತ್ತಿದ್ದು, ಮುಂದಿನ ವರ್ಷಗಳಲ್ಲಿ ದೇಶದ ಬಾಹ್ಯಾಕಾಶ ಕಾರ್ಯಕ್ರಮಗಳಿಗೆ ಇದು ಪ್ರಮುಖ ಮೈಲಿಗಲ್ಲಾಗುವ ಸಾಧ್ಯತೆಯಿದೆ.