ಉಡುಪಿ: ಸರ್ಕಾರಿ ಜಾಗದಲ್ಲಿ ಅನುಮತಿ ಇಲ್ಲದೆ ಕಲ್ಲು ಸ್ಫೋಟ ನಡೆಸಿದ ಆರೋಪದ ಹಿನ್ನೆಲೆಯಲ್ಲಿ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.
ಸರ್ಕಾರಿ ಪ್ರದೇಶದಲ್ಲಿ ಅಕ್ರಮವಾಗಿ ಕಲ್ಲುಬ್ಲಾಸ್ಟಿಂಗ್ ನಡೆಸಲಾಗುತ್ತಿದೆ ಎಂಬ ಮಾಹಿತಿ ಆಧರಿಸಿ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದಾರೆ. ಈ ವೇಳೆ ನಿಯಮ ಉಲ್ಲಂಘಿಸಿ ಕಲ್ಲು ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರನ್ನು ವಶಕ್ಕೆ ಪಡೆದು ಬಂಧಿಸಲಾಗಿದೆ.
ಅನುಮತಿ ಇಲ್ಲದೆ ಕಲ್ಲು ಸ್ಫೋಟ ನಡೆಸಿರುವ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.





