15 September 2026 |

ತುಳುವಿಗೆ ಅಧಿಕೃತ ಮಾನ್ಯತೆಗಾಗಿ ಮತ್ತೊಂದು ಹೋರಾಟ; ಸೆ.15ರಂದು ‘X’ ಅಭಿಯಾನ

  • 14 Sep 2026 05:53:40 PM

ಮಂಗಳೂರು: ತುಳು ಭಾಷೆಗೆ ಕರ್ನಾಟಕ ಮತ್ತು ಕೇರಳ ರಾಜ್ಯಗಳಲ್ಲಿ ಅಧಿಕೃತ ಭಾಷೆಯ ಸ್ಥಾನಮಾನ ನೀಡಬೇಕೆಂಬ ಬೇಡಿಕೆಗೆ ಮತ್ತೆ ವೇಗ ಬಂದಿದೆ. ಈ ನಿಟ್ಟಿನಲ್ಲಿ ತುಳು ಪರ ಸಂಘಟನೆಗಳು ಸೆಪ್ಟೆಂಬರ್ 15ರಂದು ‘X’ ಸಾಮಾಜಿಕ ಜಾಲತಾಣದಲ್ಲಿ ಬೃಹತ್ ಅಭಿಯಾನ ಹಮ್ಮಿಕೊಳ್ಳಲಿವೆ.

 

ತುಳು ಭಾಷೆಯ ಉಳಿವು ಮತ್ತು ಅಭಿವೃದ್ಧಿಗೆ ಸರ್ಕಾರದ ಅಧಿಕೃತ ಮಾನ್ಯತೆ ಅತ್ಯಗತ್ಯ ಎಂದು ಸಂಘಟನೆಗಳು ಒತ್ತಾಯಿಸಿವೆ. ಅಧಿಕೃತ ಸ್ಥಾನಮಾನ ದೊರೆತರೆ ತುಳು ಭಾಷೆಯ ಬಳಕೆಗೆ ಮತ್ತಷ್ಟು ಉತ್ತೇಜನ ಸಿಗುವುದರ ಜೊತೆಗೆ, ಯುವ ಪೀಳಿಗೆಯಲ್ಲೂ ಭಾಷೆಯ ಮೇಲಿನ ಆಸಕ್ತಿ ಹೆಚ್ಚಲಿದೆ ಎಂಬ ನಿರೀಕ್ಷೆ ವ್ಯಕ್ತವಾಗಿದೆ.

 

ಅಭಿಯಾನವನ್ನು ವ್ಯಾಪಕವಾಗಿ ನಡೆಸುವ ಮೂಲಕ ಸರ್ಕಾರದ ಗಮನ ಸೆಳೆಯಲು ಸಂಘಟನೆಗಳು ಮುಂದಾಗಿವೆ. ತುಳು ಭಾಷೆಯ ಪರ ಧ್ವನಿ ಎತ್ತಲು ಭಾಷಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ‘X’ ಅಭಿಯಾನದಲ್ಲಿ ಭಾಗವಹಿಸುವಂತೆ ಕರೆ ನೀಡಲಾಗಿದೆ.