ದೊಡ್ಡಬಳ್ಳಾಪುರ: ಪ್ರೀತಿಸಿ ಮದುವೆಯಾಗಿದ್ದ ಪತ್ನಿಯನ್ನು ಲಾಡ್ಜ್‌ಗೆ ಕರೆದುಕೊಂಡು ಬಂದ ಪತಿಯೇ ಆಕೆಯನ್ನು ಉಸಿರುಗಟ್ಟಿಸಿ ಹತ್ಯೆಗೈದು ಪರಾರಿಯಾಗಿರುವ ಘಟನೆ ದೊಡ್ಡಬಳ್ಳಾಪುರ ನಗರದ ಲಾಡ್ಜ್‌ವೊಂದರಲ್ಲಿ ನಡೆದಿದೆ.
ಮೃತ ಮಹಿಳೆಯನ್ನು ಗೌರಿಬಿದನೂರು ತಾಲೂಕಿನ ನಗರಗೆರೆ ಗ್ರಾಮದ ವಿದ್ಯಾ (23) ಎಂದು ಗುರುತಿಸಲಾಗಿದೆ. ಆಕೆಯ ಪತಿ ಆನಂದ್ ಕೃತ್ಯ ಎಸಗಿ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ.
ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, ಆನಂದ್ ಐಡಿ ಕಾರ್ಡ್‌ನ ಟ್ಯಾಗ್ ಬಳಸಿ ವಿದ್ಯಾಳ ಕತ್ತು ಬಿಗಿದು ಉಸಿರುಗಟ್ಟಿಸಿ ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ಬಳಿಕ ಆಕೆಯ ಮೊಬೈಲ್ ಫೋನ್ ತೆಗೆದುಕೊಂಡು ಲಾಡ್ಜ್‌ನಿಂದ ಹೊರಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದು, ಪರಾರಿಯಾಗಿರುವ ಆನಂದ್‌ಗಾಗಿ ಶೋಧ ನಡೆಸುತ್ತಿದ್ದಾರೆ.





