ಮಂಗಳೂರು: ನಗರದ ಪಡೀಲ್‌ನ ಪ್ರಜಾಸೌಧದಲ್ಲಿ ಇಂದು ಕರ್ನಾಟಕ ರಾಜ್ಯ ಸಚಿವ ಸಂಪುಟದ ವಿಶೇಷ ಸಭೆ ನಡೆಯಲಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ.
ಕರಾವಳಿ ಭಾಗದ ಅಭಿವೃದ್ಧಿಗೆ ಸಂಬಂಧಿಸಿದ ಹಲವು ಪ್ರಮುಖ ವಿಚಾರಗಳು ಸಭೆಯಲ್ಲಿ ಚರ್ಚೆಗೆ ಬರುವ ನಿರೀಕ್ಷೆಯಿದೆ. ಮೂಲಸೌಕರ್ಯ, ಬಂದರು, ಮೀನುಗಾರಿಕೆ, ಪ್ರವಾಸೋದ್ಯಮ, ಕೈಗಾರಿಕೆ ಹಾಗೂ ನಗರಾಭಿವೃದ್ಧಿ ಸೇರಿದಂತೆ ವಿವಿಧ ಕ್ಷೇತ್ರಗಳ ಯೋಜನೆಗಳ ಕುರಿತು ಸರ್ಕಾರ ಮಹತ್ವದ ಚರ್ಚೆ ನಡೆಸುವ ಸಾಧ್ಯತೆಯಿದೆ.
ಮಂಗಳೂರಿನಲ್ಲಿ ನಡೆಯುತ್ತಿರುವ ಈ ವಿಶೇಷ ಸಚಿವ ಸಂಪುಟ ಸಭೆಯ ಹಿನ್ನೆಲೆಯಲ್ಲಿ ನಗರದ ಕೆಲವು ಪ್ರಮುಖ ರಸ್ತೆಗಳಲ್ಲಿ ಸಂಚಾರ ವ್ಯವಸ್ಥೆಯಲ್ಲೂ ಬದಲಾವಣೆ ಮಾಡಲಾಗಿದೆ.
ಮಂಗಳೂರು ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದ್ದು, ಸಚಿವ ಸಂಪುಟದ ವಿಶೇಷ ಸಭೆ ಯಶಸ್ವಿಯಾಗಿ ನಡೆಯಲು ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.
ಕರಾವಳಿ ಭಾಗದ ಅಭಿವೃದ್ಧಿ ಹಾಗೂ ಮೂಲಸೌಕರ್ಯಕ್ಕೆ ಸಂಬಂಧಿಸಿದಂತೆ ಹಲವು ಮಹತ್ವದ ಯೋಜನೆಗಳಿಗೆ ಈ ಸಭೆಯಲ್ಲಿ ಒತ್ತು ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ. ಇದೇ ವೇಳೆ, ತುಳು ಭಾಷೆಗೆ ಮಾನ್ಯತೆ ನೀಡುವ ಕುರಿತು ಯಾವುದೇ ನಿರ್ಣಯ ಕೈಗೊಳ್ಳಲಾಗುತ್ತದೆಯೇ ಎಂಬುದು ಕುತೂಹಲ ಮೂಡಿಸಿದೆ.





