19 September 2026 |

ಸಿಎಂ, ಸಚಿವರಿಗೆ ಕಪ್ಪು ಬಾವುಟ ಪ್ರದರ್ಶನ: ಎಸ್‌ಡಿಪಿಐ ಮುಖಂಡರು, ಕಾರ್ಯಕರ್ತರು ಪೊಲೀಸ್ ವಶಕ್ಕೆ

  • 18 Sep 2026 11:37:59 AM

ಮಂಗಳೂರು: ಕೊಳತ್ತಮಜಲು ಅಬ್ದುಲ್ ರಹ್ಮಾನ್ ಹತ್ಯೆ ಪ್ರಕರಣದ ಆರೋಪಿಗಳಿಗೆ ಜಾಮೀನು ದೊರೆತಿರುವುದನ್ನು ವಿರೋಧಿಸಿ ಹಾಗೂ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿ ಎಸ್‌ಡಿಪಿಐ ಕಾರ್ಯಕರ್ತರು ಇಂದು ಮಂಗಳೂರಿನಲ್ಲಿ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ ನಡೆಸಿದರು.

 

ನಗರದ ಸ್ಟೇಟ್ ಬ್ಯಾಂಕ್‌ನ ರಾವ್ ಆ್ಯಂಡ್ ರಾವ್ ಸರ್ಕಲ್ ಬಳಿ ನಡೆದ ಪ್ರತಿಭಟನೆಯಲ್ಲಿ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಹಾಗೂ ಸಚಿವರಿಗೆ ಕಪ್ಪು ಬಾವುಟ ತೋರಿಸಲಾಯಿತು. 

 

ಈ ವೇಳೆ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಎಸ್‌ಡಿಪಿಐ ರಾಜ್ಯ ಮುಖಂಡ ರಿಯಾಝ್ ಕಡಂಬು, ಮಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಅನ್ವರ್ ಸಾದತ್ ಬಜತ್ತೂರು, ಮುಖಂಡರಾದ ಮೂನೀಶ್ ಅಲಿ, ಅಶ್ರಫ್ ಅಡ್ಡರು ಸೇರಿದಂತೆ ಹಲವರನ್ನು ಪೊಲೀಸರು ವಶಕ್ಕೆ ಪಡೆದು ಕರೆದೊಯ್ದರು.