19 September 2026 |

ಪಂಚಾಯಿತಿ ಚುನಾವಣೆ ಸಿದ್ಧತೆಗೆ ₹151.31 ಕೋಟಿ ಬಿಡುಗಡೆಗೆ ಸಂಪುಟ ಅಸ್ತು

  • 19 Sep 2026 10:21:47 AM

ಮಂಗಳೂರು: ಕರ್ನಾಟಕದಲ್ಲಿ ನಡೆಯಲಿರುವ ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಸಿದ್ಧತೆಗಾಗಿ ರಾಜ್ಯ ಸಚಿವ ಸಂಪುಟ ₹151.31 ಕೋಟಿ ವೆಚ್ಚಕ್ಕೆ ಅನುಮೋದನೆ ನೀಡಿದೆ.

 

ಚುನಾವಣಾ ಪ್ರಕ್ರಿಯೆಗೆ ಅಗತ್ಯವಿರುವ ಬ್ಯಾಲೆಟ್ ಬಾಕ್ಸ್‌ಗಳ ಖರೀದಿ, ಮತದಾನ ವ್ಯವಸ್ಥೆಗೆ ಸಂಬಂಧಿಸಿದ ಸಿದ್ಧತೆಗಳು ಹಾಗೂ ವೆಬ್‌ಕಾಸ್ಟಿಂಗ್ ವ್ಯವಸ್ಥೆ ಸೇರಿದಂತೆ ವಿವಿಧ ಚುನಾವಣಾ ಕಾರ್ಯಗಳಿಗೆ ಈ ಅನುದಾನ ಬಳಸಲಾಗುತ್ತದೆ.

 

ಮುಂಬರುವ ಪಂಚಾಯಿತಿ ಚುನಾವಣೆಗಳನ್ನು ಸುಗಮವಾಗಿ ನಡೆಸಲು ಅಗತ್ಯ ಮೂಲಸೌಕರ್ಯ ಮತ್ತು ತಾಂತ್ರಿಕ ವ್ಯವಸ್ಥೆಗಳನ್ನು ಸಿದ್ಧಪಡಿಸುವ ನಿಟ್ಟಿನಲ್ಲಿ ಸರ್ಕಾರ ಈ ನಿರ್ಧಾರ ಕೈಗೊಂಡಿದೆ.