ಕಟಿಹಾರ್ ಎಕ್ಸ್‌ಪ್ರೆಸ್‌ನ ಸ್ಲೀಪರ್ ಕೋಚ್‌ನಲ್ಲಿ ಚಲಿಸುತ್ತಿದ್ದ ರೈಲಿನಲ್ಲೇ ಹಾವು ಕಾಣಿಸಿಕೊಂಡ ಘಟನೆ ಪ್ರಯಾಣಿಕರಲ್ಲಿ ಆತಂಕ ಮೂಡಿಸಿದೆ.
ರೈಲು ಸಂಚರಿಸುತ್ತಿದ್ದ ವೇಳೆ ಸೀಟಿನ ಕೆಳಭಾಗದಲ್ಲಿ ಹಾವು ಇರುವುದನ್ನು ಪ್ರಯಾಣಿಕರು ಗಮನಿಸಿದ್ದಾರೆ. ಹಾವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕೆಲಕಾಲ ಪ್ರಯಾಣಿಕರಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು ಎನ್ನಲಾಗಿದೆ.
ಘಟನೆಯ ದೃಶ್ಯವನ್ನು ಪ್ರಯಾಣಿಕರು ಮೊಬೈಲ್‌ನಲ್ಲಿ ಸೆರೆಹಿಡಿದಿದ್ದು, ಬಳಿಕ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.
ಇದೀಗ ಹಾವಿನ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ರೈಲು ಪ್ರಯಾಣಿಕರ ಸುರಕ್ಷತೆ ಕುರಿತು ಚರ್ಚೆ ಹುಟ್ಟುಹಾಕಿದೆ.





