ಮಂಗಳೂರು: ಲಂಚ ಸ್ವೀಕರಿಸುತ್ತಿದ್ದ ಆರೋಪದ ಮೇಲೆ ಬಜ್ಪೆ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಬಾಲಕೃಷ್ಣ ಅವರು ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಸಿಕ್ಕಿಬಿದ್ದಿರುವುದಾಗಿ ತಿಳಿದುಬಂದಿದೆ.
ಚೀಟಿಂಗ್ ಪ್ರಕರಣವೊಂದರಲ್ಲಿ ಆರೋಪಿಗಳಿಂದ ವಶಪಡಿಸಿಕೊಳ್ಳಲಾಗಿದ್ದ ಹಣವನ್ನು ಬಿಡುಗಡೆ ಮಾಡಲು ₹25 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ.
ಈ ಮೊತ್ತದ ಮೊದಲ ಕಂತಾಗಿ ₹5 ಸಾವಿರ ಸ್ವೀಕರಿಸುವ ಸಂದರ್ಭದಲ್ಲಿ ಲೋಕಾಯುಕ್ತ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಇನ್ಸ್‌ಪೆಕ್ಟರ್ ಅವರನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ.
ಲಂಚದ ಹಣ ಸ್ವೀಕರಿಸುವಾಗಲೇ ಅವರನ್ನು ರೆಡ್‌ಹ್ಯಾಂಡ್ ಆಗಿ ಹಿಡಿಯಲಾಗಿದೆ ಎನ್ನಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಅಧಿಕಾರಿಗಳು ಮುಂದಿನ ತನಿಖೆ ನಡೆಸುತ್ತಿದ್ದಾರೆ.





