ಮಂಗಳೂರು: ನೇತ್ರಾವತಿ ಹಾಗೂ ಫಲ್ಗುಣಿ ನದಿಗಳು ಮತ್ತು ನದಿ ಮುಖಗಳಲ್ಲಿ ಸಮರ್ಪಕವಾಗಿ ಹೂಳೆತ್ತುವಿಕೆ (ಡ್ರೆಜ್ಜಿಂಗ್) ನಡೆಯುತ್ತಿಲ್ಲ ಎಂಬ ಆರೋಪ ಕೇಳಿಬಂದಿದೆ.
ಸುಮಾರು 25 ವರ್ಷಗಳಿಂದ ಸೂಕ್ತ ಡ್ರೆಜ್ಜಿಂಗ್ ಕಾಮಗಾರಿ ನಡೆದಿಲ್ಲ ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಮೀನುಗಾರರ ಘಟಕದ ಅಧ್ಯಕ್ಷ ಚೇತನ್ ಬೆಂಗ್ರೆ ಆರೋಪಿಸಿದ್ದಾರೆ.
ನದಿಗಳಲ್ಲಿ ಸಂಚಾರ ಸುಗಮವಾಗುವುದರ ಜೊತೆಗೆ ಮೀನುಗಾರರ ಜೀವನೋಪಾಯಕ್ಕೂ ಅನುಕೂಲವಾಗುವಂತೆ ತಕ್ಷಣ ಡ್ರೆಜ್ಜಿಂಗ್ ಯಂತ್ರ ಖರೀದಿಸಿ ಕಾಮಗಾರಿ ಆರಂಭಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ಮಂಗಳೂರಿನ ನದಿಗಳಲ್ಲಿ ಹೂಳು ಸಂಗ್ರಹವಾಗುತ್ತಿರುವ ಹಿನ್ನೆಲೆಯಲ್ಲಿ ಈ ಬೇಡಿಕೆ ಇದೀಗ ಕರಾವಳಿಯಲ್ಲಿ ಮತ್ತೆ ಚರ್ಚೆಗೆ ಬಂದಿದೆ.





