23 September 2026 |

ಮಂಗಳೂರು: ಸೆ.24ರಂದು ಅತ್ಯಂತ ಭಾರಿ ಮಳೆ ಸಾಧ್ಯತೆ!

  • 23 Sep 2026 10:53:23 AM

ಮಂಗಳೂರು ಹಾಗೂ ಕರಾವಳಿ ಭಾಗದಲ್ಲಿ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆ ಇದೆ. ಸೆಪ್ಟೆಂಬರ್ 23ರಂದು ಮಂಗಳೂರು ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಾರಿ ಅಥವಾ ಅತಿ ಭಾರಿ ಮಳೆಯ ಜೊತೆಗೆ ಗುಡುಗು ಮತ್ತು ಬಲವಾದ ಗಾಳಿ ಬೀಸುವ ಸಾಧ್ಯತೆ ಇದೆ.

 

ಇದರ ಬೆನ್ನಲ್ಲೇ ಸೆಪ್ಟೆಂಬರ್ 24ರಂದು ಅತಿ ಭಾರಿಯಿಂದ ಅತ್ಯಂತ ಭಾರಿ ಮಳೆಯಾಗುವ ಸಾಧ್ಯತೆ ಇರುವುದಾಗಿ ಹವಾಮಾನ ಮುನ್ಸೂಚನೆ ನೀಡಲಾಗಿದೆ. ಹೀಗಾಗಿ ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.

 

ಭಾರಿ ಮಳೆಯ ಸಂದರ್ಭದಲ್ಲಿ ಅಗತ್ಯವಿಲ್ಲದ ಪ್ರಯಾಣ ತಪ್ಪಿಸಿ, ತಗ್ಗು ಪ್ರದೇಶಗಳು ಹಾಗೂ ನದಿ–ತೋಡುಗಳ ಸಮೀಪ ಇರುವವರು ಹೆಚ್ಚಿನ ಎಚ್ಚರಿಕೆ ವಹಿಸುವುದು ಸೂಕ್ತ.