ಮೈಸೂರು: ಬೆಂಗಳೂರು–ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಟ್ರಕ್‌ನಿಂದ ಅಡುಗೆ ಎಣ್ಣೆಯ ಪ್ಯಾಕೆಟ್‌ಗಳು ರಸ್ತೆಗೆ ಬಿದ್ದ ಘಟನೆ ನಡೆದಿದೆ.
ರಸ್ತೆಯುದ್ದಕ್ಕೂ ಎಣ್ಣೆ ಪ್ಯಾಕೆಟ್‌ಗಳು ಚದುರಿಕೊಂಡಿರುವುದನ್ನು ಕಂಡ ಕೆಲ ವಾಹನ ಸವಾರರು ತಮ್ಮ ವಾಹನಗಳನ್ನು ನಿಲ್ಲಿಸಿ, ರಸ್ತೆಯಲ್ಲಿದ್ದ ಪ್ಯಾಕೆಟ್‌ಗಳನ್ನು ಸಂಗ್ರಹಿಸಿಕೊಂಡಿದ್ದಾರೆ.
ಈ ವೇಳೆ ಜನರು ಎಣ್ಣೆ ಪ್ಯಾಕೆಟ್‌ಗಳನ್ನು ತೆಗೆದುಕೊಳ್ಳಲು ಮುಗಿಬಿದ್ದಿರುವ ದೃಶ್ಯಗಳನ್ನು ಕೆಲವರು ಮೊಬೈಲ್‌ನಲ್ಲಿ ಸೆರೆಹಿಡಿದಿದ್ದಾರೆ. ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ನೆಟ್ಟಿಗರಿಂದ ವಿಭಿನ್ನ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿವೆ.
ರಸ್ತೆಯ ಮೇಲೆ ವಸ್ತುಗಳು ಬಿದ್ದಿದ್ದರಿಂದ ವಾಹನ ಸಂಚಾರಕ್ಕೂ ಅಡಚಣೆ ಉಂಟಾಗಿದೆ.





