28 September 2026 |

ಮಾಣಿ ಸಮೀಪ ಕೋಕ್ ಸಾಗಿಸುತ್ತಿದ್ದ ಲಾರಿಗೆ ಆಕಸ್ಮಿಕ ಬೆಂಕಿ; ಭಸ್ಮ

  • 28 Sep 2026 11:43:08 AM

ಬಂಟ್ವಾಳ: ರಾಷ್ಟ್ರೀಯ ಹೆದ್ದಾರಿ ಬಿ.ಸಿ.ರೋಡು–ಬೆಂಗಳೂರು ಮಾರ್ಗದಲ್ಲಿ ಮಾಣಿ ಸಮೀಪದ ಸತ್ತಿಕಲ್ಲು ಅಮೈ ಎಂಬಲ್ಲಿ ಕೋಕ್ ಸಾಗಿಸುತ್ತಿದ್ದ ಲಾರಿಗೆ ಸೆಪ್ಟೆಂಬರ್ 26ರ ಶನಿವಾರ ರಾತ್ರಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ.

 

ಲಾರಿಯಲ್ಲಿ ಬೆಂಕಿ ಕಾಣಿಸಿಕೊಂಡ ಬಳಿಕ ಕೆಲವೇ ಕ್ಷಣಗಳಲ್ಲಿ ಜ್ವಾಲೆ ತೀವ್ರಗೊಂಡಿದೆ ಎನ್ನಲಾಗಿದೆ. ಘಟನೆಯ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಬೆಂಕಿ ಕಾಣಿಸಿಕೊಂಡಿರುವ ಮಾಹಿತಿ ದೊರೆತ ತಕ್ಷಣ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದರು.

 

ಘಟನೆಯ ಮಾಹಿತಿ ಪಡೆದ ಬಂಟ್ವಾಳ ಗ್ರಾಮಾಂತರ ಠಾಣೆ ಪೊಲೀಸರು ಕೂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಲಾರಿಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲಕಾಲ ವಾಹನ ಸಂಚಾರಕ್ಕೆ ಅಡಚಣೆ ಉಂಟಾದ ಬಗ್ಗೆ ವರದಿಯಾಗಿದೆ. ಬೆಂಕಿ ಅವಘಡಕ್ಕೆ ಕಾರಣವೇನು ಎಂಬುದರ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.