30 September 2026 |

405 ಅಂಗನವಾಡಿಗಳಿಗೆ ಇನ್ನೂ ವಾಟರ್ ಪ್ಯೂರಿಫೈಯರ್ ಸೌಲಭ್ಯವಿಲ್ಲ

  • 29 Sep 2026 09:42:25 AM

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಹಲವು ಅಂಗನವಾಡಿ ಕೇಂದ್ರಗಳಲ್ಲಿ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಇನ್ನೂ ಪೂರ್ಣಗೊಂಡಿಲ್ಲ. ಜಿಲ್ಲೆಯ ಒಟ್ಟು 2,131 ಅಂಗನವಾಡಿ ಕೇಂದ್ರಗಳ ಪೈಕಿ 405 ಕೇಂದ್ರಗಳಿಗೆ ವಾಟರ್ ಪ್ಯೂರಿಫೈಯರ್ ಸೌಲಭ್ಯ ಲಭ್ಯವಾಗಿಲ್ಲ ಎಂದು ವರದಿಯಾಗಿದೆ.

 

ಮಕ್ಕಳ ಆರೋಗ್ಯದ ದೃಷ್ಟಿಯಿಂದ ಅಂಗನವಾಡಿಗಳಲ್ಲಿ ಸುರಕ್ಷಿತ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸುವುದು ಅಗತ್ಯವಾಗಿದ್ದು, ಉಳಿದ ಕೇಂದ್ರಗಳಿಗೂ ನೀರು ಶುದ್ಧೀಕರಣ ಘಟಕ ಅಳವಡಿಸಲು ಕ್ರಮ ಕೈಗೊಳ್ಳಲಾಗುತ್ತಿದೆ.

 

ಈ ನಿಟ್ಟಿನಲ್ಲಿ ಅಗತ್ಯವಿರುವ ಕೇಂದ್ರಗಳಿಗೆ ವಾಟರ್ ಪ್ಯೂರಿಫೈಯರ್ ಒದಗಿಸಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಪ್ರಸ್ತಾವನೆ ಸಲ್ಲಿಸಿದೆ. ಪ್ರಸ್ತಾವನೆಗೆ ಅನುಮೋದನೆ ದೊರೆತ ಬಳಿಕ ಹಂತ ಹಂತವಾಗಿ ಸೌಲಭ್ಯ ಕಲ್ಪಿಸುವ ನಿರೀಕ್ಷೆಯಿದೆ.