ಉಡುಪಿ: ಜಿಲ್ಲೆಯ ಮಲ್ಪೆಯಲ್ಲಿ ಮಂಗಳವಾರ ಬೆಳಗ್ಗೆ ವ್ಯಕ್ತಿಯೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಮೃತರನ್ನು ಆಂಧ್ರಪ್ರದೇಶ ಮೂಲದ ಪರಮೇಶ್ ಎಂದು ಗುರುತಿಸಲಾಗಿದೆ.
ಪರಮೇಶ್ ಅವರು ಗುಜರಿ ವಸ್ತುಗಳನ್ನು ಸಂಗ್ರಹಿಸುವ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಪ್ರತಿದಿನ ರಾತ್ರಿ ಮಲಗುತ್ತಿದ್ದ ಸ್ಥಳದಲ್ಲಿಯೇ ಅವರು ಕೊಲೆಯಾಗಿರುವುದು ಬೆಳಕಿಗೆ ಬಂದಿದೆ.
ಘಟನೆ ಕುರಿತು ಮಾಹಿತಿ ದೊರೆಯುತ್ತಿದ್ದಂತೆ ಮಲ್ಪೆ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಹತ್ಯೆಗೆ ಕಾರಣ ಹಾಗೂ ಆರೋಪಿಗಳ ಬಗ್ಗೆ ಇನ್ನಷ್ಟೇ ಮಾಹಿತಿ ತಿಳಿದುಬರಬೇಕಿದೆ. ಪ್ರಕರಣದ ತನಿಖೆ ಮುಂದುವರಿದಿದೆ.





