ಬಂಟ್ವಾಳ: ದನಗಳನ್ನು ಅಕ್ರಮವಾಗಿ ಹಾಗೂ ಹಿಂಸಾತ್ಮಕ ರೀತಿಯಲ್ಲಿ ಸಾಗಿಸಲಾಗುತ್ತಿದ್ದ ಲಾರಿಯೊಂದನ್ನು ಬಂಟ್ವಾಳ ನಗರ ಪೊಲೀಸರು ವಶಕ್ಕೆ ಪಡೆದ ಘಟನೆ ಬುಧವಾರ ಮುಂಜಾನೆ ಕಲ್ಲಡ್ಕ ಮೇಲ್ವೇತುವೆ ಸಮೀಪ ನಡೆದಿದೆ.
ಗುಂಡ್ಯ ಕಡೆಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಲಾರಿಯಲ್ಲಿ 20ಕ್ಕೂ ಅಧಿಕ ದನಗಳನ್ನು ಸಾಗಿಸಲಾಗುತ್ತಿತ್ತು ಎನ್ನಲಾಗಿದೆ. ಈ ಕುರಿತು ಮಾಹಿತಿ ಲಭ್ಯವಾದ ಬಳಿಕ ಪೊಲೀಸರು ಲಾರಿಯನ್ನು ತಡೆದು ಪರಿಶೀಲನೆ ನಡೆಸಿದ್ದಾರೆ.
ಪೊಲೀಸರು ಲಾರಿಯನ್ನು ನಿಲ್ಲಿಸುತ್ತಿದ್ದಂತೆ ಚಾಲಕ ವಾಹನದಿಂದ ಇಳಿದು ಸ್ಥಳದಿಂದ ಪರಾರಿಯಾಗಿದ್ದಾನೆ. ಬಳಿಕ ಬಂಟ್ವಾಳ ನಗರ ಠಾಣೆಯ ಪೊಲೀಸರು ದನಗಳನ್ನು ರಕ್ಷಿಸಿ, ಲಾರಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪರಾರಿಯಾಗಿರುವ ಚಾಲಕನ ಪತ್ತೆ ಸೇರಿದಂತೆ ತನಿಖೆ ಮುಂದುವರಿದಿದೆ.





