ವಿಟ್ಲ: ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಒಣತ್ಯಾಜ್ಯವನ್ನು ವೈಜ್ಞಾನಿಕವಾಗಿ ನಿರ್ವಹಿಸುವ ಉದ್ದೇಶದಿಂದ ಹೊಸ ಮೆಟೀರಿಯಲ್ ರಿಕವರಿ ಫೆಸಿಲಿಟಿ (MRF) ಘಟಕವನ್ನು ವಿಟ್ಲದಲ್ಲಿ ಆರಂಭಿಸಲಾಗಿದೆ.
ಸುಮಾರು ₹60.10 ಲಕ್ಷ ವೆಚ್ಚದಲ್ಲಿ ನಿರ್ಮಿಸಿರುವ ಈ ಘಟಕವು ಪ್ರತಿದಿನ ಗರಿಷ್ಠ 3 ಟನ್ ಒಣತ್ಯಾಜ್ಯವನ್ನು ಸಂಸ್ಕರಿಸುವ ಸಾಮರ್ಥ್ಯ ಹೊಂದಿದೆ.
ಪಟ್ಟಣ ಪ್ರದೇಶದಿಂದ ಸಂಗ್ರಹವಾಗುವ ಒಣತ್ಯಾಜ್ಯವನ್ನು ಇಲ್ಲಿ ಪ್ರತ್ಯೇಕಿಸಿ, ವಿಂಗಡಿಸಿ ಹಾಗೂ ಸೂಕ್ತ ರೀತಿಯಲ್ಲಿ ನಿರ್ವಹಿಸಲು ವ್ಯವಸ್ಥೆ ಕಲ್ಪಿಸಲಾಗಿದೆ. ಇದರಿಂದ ವಿಟ್ಲ ಭಾಗದಲ್ಲಿ ತ್ಯಾಜ್ಯ ನಿರ್ವಹಣಾ ವ್ಯವಸ್ಥೆ ಮತ್ತಷ್ಟು ಸುಧಾರಿಸುವ ನಿರೀಕ್ಷೆಯಿದೆ.
ಸ್ವಚ್ಛ ಭಾರತ್ ಮಿಷನ್ 2.0 ಸೇರಿದಂತೆ ವಿವಿಧ ಯೋಜನೆಗಳ ಅಡಿಯಲ್ಲಿ ಈ ತ್ಯಾಜ್ಯ ನಿರ್ವಹಣಾ ಘಟಕವನ್ನು ನಿರ್ಮಿಸಲಾಗಿದೆ.





