05 October 2026 |

ಜೀವ ಉಳಿಸುವ ಔಷಧಗಳ ಬೆಲೆ ನಿಯಂತ್ರಣಕ್ಕೆ ಪ್ರತ್ಯೇಕ ಕಾನೂನು ಬೇಕು: ಯು.ಟಿ. ಖಾದರ್

  • 04 Oct 2026 10:44:57 AM

ಮಂಗಳೂರು: ಜೀವ ರಕ್ಷಕ ಔಷಧಗಳ ಬೆಲೆ ಏರಿಕೆಗೆ ಕಡಿವಾಣ ಹಾಕಲು ಕೇಂದ್ರ ಸರ್ಕಾರ ಪ್ರತ್ಯೇಕ ಕಾನೂನು ರೂಪಿಸಬೇಕು ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ಒತ್ತಾಯಿಸಿದ್ದಾರೆ.

 

ಪ್ರಸ್ತುತ NPPA ಬೆಲೆ ನಿಯಂತ್ರಣ ವ್ಯಾಪ್ತಿಗೆ ಬರುವ ಔಷಧಗಳ ಸಂಖ್ಯೆ ಸೀಮಿತವಾಗಿರುವುದರಿಂದ, ನಿಯಂತ್ರಣಕ್ಕೆ ಒಳಪಡದ ಕೆಲವು ಔಷಧಗಳ ದರ ಹೆಚ್ಚಾಗುತ್ತಿರುವುದು ಗಮನಕ್ಕೆ ಬಂದಿದೆ ಎಂದು ಅವರು ತಿಳಿಸಿದ್ದಾರೆ.

 

ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವಂತೆ ರಾಜ್ಯ ಸರ್ಕಾರದ ವತಿಯಿಂದ ಕೇಂದ್ರಕ್ಕೆ ವರದಿ ಹಾಗೂ ಮನವಿ ಸಲ್ಲಿಸಲಾಗಿದೆ ಎಂದು ಖಾದರ್ ಹೇಳಿದ್ದಾರೆ.

 

ಇದರ ಜೊತೆಗೆ ಇಂಜೆಕ್ಷನ್‌ಗಳು, ಇಂಪ್ಲಾಂಟ್‌ಗಳು ಸೇರಿದಂತೆ ವಿವಿಧ ವೈದ್ಯಕೀಯ ಉತ್ಪನ್ನಗಳ ಬೆಲೆಗಳ ಬಗ್ಗೆಯೂ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.