06 October 2026 |

ಕಾಲೇಜು ಕ್ಯಾಂಟೀನ್ ಬಳಿ BCA ವಿದ್ಯಾರ್ಥಿಗೆ ಚೂರಿ ಇರಿತ; ಪ್ರಕರಣ ದಾಖಲು

  • 05 Oct 2026 10:13:31 AM

ಮಂಗಳೂರು: ನಗರದ ಖಾಸಗಿ ಕಾಲೇಜೊಂದರ ಕ್ಯಾಂಟೀನ್ ಸಮೀಪ ಅಂತಿಮ ವರ್ಷದ BCA ವಿದ್ಯಾರ್ಥಿಯೊಬ್ಬರ ಮೇಲೆ ಚೂರಿಯಿಂದ ಹಲ್ಲೆ ನಡೆದಿರುವ ಘಟನೆ ವರದಿಯಾಗಿದೆ.

 

ಮಹಮ್ಮದ್ ಉನೈಸ್ ಎಂಬ ವಿದ್ಯಾರ್ಥಿಗೆ ದೇಹದ ವಿವಿಧ ಭಾಗಗಳಲ್ಲಿ ಗಾಯಗಳಾಗಿದ್ದು, ಸದ್ಯ ವೆನ್‌ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

 

ಹಿಂದೆ ನಡೆದಿದ್ದ ಜಗಳದ ಹಿನ್ನೆಲೆಯಲ್ಲಿ ಈ ದಾಳಿ ನಡೆದಿರಬಹುದು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

 

ಘಟನೆಗೆ ಸಂಬಂಧಿಸಿದಂತೆ ಆರೋಪಿಗಳ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಹಲ್ಲೆಯ ನಿಖರ ಕಾರಣ ಹಾಗೂ ಆರೋಪಿಗಳ ಪಾತ್ರದ ಕುರಿತು ತನಿಖೆ ಮುಂದುವರಿದಿದೆ.