06 October 2026 |

ಸ್ನೇಹಿತರೊಂದಿಗೆ ಸಮುದ್ರದಲ್ಲಿ ಆಟವಾಡುತ್ತಿದ್ದಾಗ ಅಲೆಗಳ ಹೊಡೆತ; 14 ವರ್ಷದ ಬಾಲಕ ನಾಪತ್ತೆ

  • 06 Oct 2026 09:21:38 AM

ಮಂಗಳೂರು: ಸ್ನೇಹಿತರೊಂದಿಗೆ ಪಣಂಬೂರು ಕಡಲತೀರಕ್ಕೆ ತೆರಳಿದ್ದ ಬೆಳ್ತಂಗಡಿ ತಾಲೂಕಿನ 14 ವರ್ಷದ ಬಾಲಕನೊಬ್ಬ ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿ ನಾಪತ್ತೆಯಾಗಿರುವ ಘಟನೆ ಅ.4ರಂದು ಸಂಜೆ ನಡೆದಿದೆ.

 

ಬೆಳ್ತಂಗಡಿ ಕಸಬಾ ಗ್ರಾಮದ ರೆಂಕೆದ ಗುತ್ತು ನಿವಾಸಿ ಸೇಸಪ್ಪ ಅವರ ಪುತ್ರ ಶ್ರೇಯಸ್ (14) ನಾಪತ್ತೆಯಾಗಿರುವ ಬಾಲಕ ಎಂದು ಗುರುತಿಸಲಾಗಿದೆ.

 

ಶ್ರೇಯಸ್ ಐವರು ಸ್ನೇಹಿತರೊಂದಿಗೆ ಪಣಂಬೂರು ಬೀಚ್‌ಗೆ ಬಂದಿದ್ದ. ಎಲ್ಲರೂ ಸಮುದ್ರದಲ್ಲಿ ಆಟವಾಡುತ್ತಿದ್ದ ಸಂದರ್ಭದಲ್ಲಿ ಭಾರೀ ಅಲೆ ಬಂದು ಶ್ರೇಯಸ್‌ನನ್ನು ನೀರಿನೊಳಗೆ ಎಳೆದೊಯ್ದಿದೆ ಎನ್ನಲಾಗಿದೆ.

 

ಘಟನೆ ಬಳಿಕ ಶ್ರೇಯಸ್‌ಗಾಗಿ ಹುಡುಕಾಟ ಆರಂಭಿಸಲಾಗಿದ್ದು, ಅವರ ತಂದೆ ಪಣಂಬೂರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಬಾಲಕನ ಪತ್ತೆಗಾಗಿ ಶೋಧ ಕಾರ್ಯ ಮುಂದುವರಿಸಿದ್ದಾರೆ.