08 October 2026 |

ಬಿ. ಸಿ ರೋಡಿನ ಬ್ರಹ್ಮರಕೂಟ್ಲುನಲ್ಲಿರುವ ಟೋಲ್ ತೆರವು: ಸಂಸದ ಬ್ರಿಜೇಶ್ ಚೌಟ ಮನವಿ

  • 07 Oct 2026 11:57:54 AM

ಮಂಗಳೂರು: ಬಂಟ್ವಾಳ ತಾಲೂಕಿನ ಬಿ.ಸಿ ರೋಡ್ ಸಮೀಪದ ಬ್ರಹ್ಮರಕೂಟ್ಲುನಲ್ಲಿ ಕಾರ್ಯನಿರ್ವಹಿಸುತ್ತಿರುವ ಟೋಲ್‌ಗೇಟ್ ತೆರವುಗೊಳಿಸುವಂತೆ ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಸಂಬಂಧಪಟ್ಟ ಅಧಿಕಾರಿಗಳಲ್ಲಿ ಮನವಿ ಮಾಡಿದ್ದಾರೆ.

 

ಈ ಕುರಿತು ಅವರು ಕೇಂದ್ರ ಸಚಿವರು ಹಾಗೂ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದ್ದು, ಸ್ಥಳೀಯ ವಾಹನ ಸವಾರರು ಹಾಗೂ ಸಾರ್ವಜನಿಕರಿಗೆ ಎದುರಾಗುತ್ತಿರುವ ಸಮಸ್ಯೆಗಳನ್ನು ಗಮನಕ್ಕೆ ತಂದಿದ್ದಾರೆ.

 

ಟೋಲ್‌ಗೇಟ್‌ನಿಂದಾಗಿ ಸ್ಥಳೀಯರು ಪ್ರತಿನಿತ್ಯ ಸಂಚಾರದ ವೇಳೆ ಶುಲ್ಕ ಪಾವತಿಸುವ ಅನಿವಾರ್ಯತೆ ಎದುರಿಸುತ್ತಿದ್ದು, ಇದರಿಂದ ಸಾರ್ವಜನಿಕರಿಗೆ ಅನಾನುಕೂಲವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಟೋಲ್ ತೆರವುಗೊಳಿಸುವ ಅಗತ್ಯವನ್ನು ಸಂಸದರು ಒತ್ತಿ ಹೇಳಿದ್ದಾರೆ.

 

ಈ ಬಗ್ಗೆ ಶೀಘ್ರದಲ್ಲೇ ಸೂಕ್ತ ಕ್ರಮ ಕೈಗೊಳ್ಳುವಂತೆ ಸಂಸದರು ಮನವಿ ಮಾಡಿದ್ದು, ಸಾರ್ವಜನಿಕರ ಹಿತದೃಷ್ಟಿಯಿಂದ ಸಮಸ್ಯೆಗೆ ಪರಿಹಾರ ದೊರಕಿಸುವ ನಿಟ್ಟಿನಲ್ಲಿ ಪ್ರಯತ್ನ ಮುಂದುವರಿಸುವುದಾಗಿ ತಿಳಿಸಿದ್ದಾರೆ.