10 October 2026 |

ಸ್ಕೂಟರ್ ಅಪಘಾತ; ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು ಯುವಕರು ಮೃತ್ಯು

  • 08 Oct 2026 01:04:01 PM

ಸ್ಕೂಟರ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು ಯುವಕರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

 

ತಿರುವಿನಲ್ಲಿ ಸ್ಕೂಟರ್ ನಿಯಂತ್ರಣ ತಪ್ಪಿ ಸ್ಕಿಡ್ ಆದ ಪರಿಣಾಮ ಇಬ್ಬರೂ ಯುವಕರು ಗಂಭೀರವಾಗಿ ಗಾಯಗೊಂಡಿದ್ದರು. ಅಪಘಾತದ ಬಳಿಕ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಮುಂದುವರಿದರೂ ಇಬ್ಬರ ಜೀವ ಉಳಿಸಲಾಗಲಿಲ್ಲ.

 

ಮೃತರನ್ನು 17 ವರ್ಷದ ಪ್ರಶ್ಚಿತ್ ಹೆಗ್ಡೆ ಹಾಗೂ ದೀಕ್ಷಿತ್ ಪೂಜಾರಿ ಎಂದು ಗುರುತಿಸಲಾಗಿದೆ.

 

ಮೂಡುಬಿದಿರೆ ಪುರಸಭಾ ವ್ಯಾಪ್ತಿಯ ಕೋಟೆಬಾಗಿಲು ಪ್ರದೇಶದಲ್ಲಿ ಬುಧವಾರ ಸಂಜೆ ಈ ಅಪಘಾತ ಸಂಭವಿಸಿದೆ.