10 October 2026 |

11 ವರ್ಷದ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ನಿಶಾ ರಾಫೆಲ್ ವಿರುದ್ಧ ಪೋಕ್ಸೋ ಪ್ರಕರಣ

  • 08 Oct 2026 04:33:12 PM

ತ್ರಿಶೂರ್: 11 ವರ್ಷದ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ಪರಿಚಿತರಾಗಿರುವ ನಿಶಾ ರಾಫೆಲ್ ವಿರುದ್ಧ ಕೇರಳದ ತ್ರಿಶೂರ್ ಪಶ್ಚಿಮ ಠಾಣೆ ಪೊಲೀಸರು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.

 

ಆರೋಪ ಬೆಳಕಿಗೆ ಬಂದ ಬಳಿಕ ಬಾಲಕನನ್ನು ತಕ್ಷಣ ತ್ರಿಶೂರ್ ಜನರಲ್ ಆಸ್ಪತ್ರೆಗೆ ದಾಖಲಿಸಿ ವೈದ್ಯಕೀಯ ಹಾಗೂ ಕಾನೂನುಬದ್ಧ ಪರೀಕ್ಷೆಗೆ ಒಳಪಡಿಸಲಾಗಿದೆ. ಈ ಪರೀಕ್ಷೆಯ ವರದಿಯಲ್ಲಿ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವುದು ದೃಢಪಟ್ಟಿದೆ ಎಂದು ಪೊಲೀಸ್ ಮೂಲಗಳನ್ನು ಉಲ್ಲೇಖಿಸಿ ವರದಿಗಳು ತಿಳಿಸಿವೆ.

 

ಆದರೆ ನಿಶಾ ರಾಫೆಲ್ ಅವರ ಆಪ್ತರು ಆರೋಪಗಳನ್ನು ಸಂಪೂರ್ಣವಾಗಿ ನಿರಾಕರಿಸಿದ್ದಾರೆ. ಪ್ರಕರಣವು ಆಧಾರರಹಿತವಾಗಿದ್ದು, ಕಟ್ಟುಕಥೆಯಾಗಿದೆ ಎಂದು ಅವರು ಹೇಳಿದ್ದಾರೆ. ಎರಡು ಫ್ಲಾಟ್‌ಗಳ ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ನಿಶಾ ಹಾಗೂ ದೂರುದಾರರ ಕುಟುಂಬದ ನಡುವೆ ಹಿಂದಿನಿಂದಲೂ ಕಾನೂನು ವಿವಾದ ಮತ್ತು ವೈಯಕ್ತಿಕ ವೈಮನಸ್ಸು ಇತ್ತು. ಇದೇ ಹಿನ್ನೆಲೆಯಲ್ಲಿ ತಮ್ಮ ವಿರುದ್ಧ ಸುಳ್ಳು ದೂರು ನೀಡಲಾಗಿದೆ ಎಂಬುದು ನಿಶಾ ಪರದವರ ವಾದವಾಗಿದೆ.

 

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತ್ರಿಶೂರ್ ಪಶ್ಚಿಮ ಠಾಣೆ ಪೊಲೀಸರು ತನಿಖೆಯನ್ನು ಮುಂದುವರಿಸಿದ್ದು, ಆರೋಪಗಳ ನಿಜಾಸತ್ಯವನ್ನು ಪರಿಶೀಲಿಸುವ ಕಾರ್ಯದಲ್ಲಿ ತೊಡಗಿದ್ದಾರೆ.