11 October 2026 |

ಅಕ್ರಮವಾಗಿ ಜಾನುವಾರು ಮಾರಾಟ ಆರೋಪ; ಮನೆ, ಕೊಟ್ಟಿಗೆ ಜಪ್ತಿ

  • 10 Oct 2026 03:15:14 PM

ಪುತ್ತೂರು: ಅಕ್ರಮವಾಗಿ ಜಾನುವಾರುಗಳನ್ನು ಮಾರಾಟ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಪುತ್ತೂರು ಗ್ರಾಮಾಂತರ ಪೊಲೀಸರು ಶಿವಪ್ರಸಾದ್ ಅವರಿಗೆ ಸೇರಿದ ಮನೆ ಹಾಗೂ ಕೊಟ್ಟಿಗೆ ಪರಿಸರವನ್ನು ಜಪ್ತಿ ಮಾಡಿದ್ದಾರೆ.

 

ಈ ಪ್ರಕರಣಕ್ಕೆ ಸಂಬಂಧಿಸಿದಂತೆ 2026ರ ಅಕ್ಟೋಬರ್ 5ರಂದು ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 125/2026ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ತಮ್ಮ ಮನೆಯಲ್ಲಿದ್ದ ಜಾನುವಾರುಗಳನ್ನು ಅಗತ್ಯ ದಾಖಲೆಗಳನ್ನು ಪಡೆಯದೆ ಅಕ್ರಮವಾಗಿ ಮಾರಾಟ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿತ್ತು.

 

ಪ್ರಕರಣದ ಕುರಿತು ತನಿಖೆ ಕೈಗೊಂಡ ಪೊಲೀಸರು, ನಿಯಮಾನುಸಾರ ಕ್ರಮವಾಗಿ ಅಕ್ಟೋಬರ್ 8ರಂದು ಶಿವಪ್ರಸಾದ್ ಅವರಿಗೆ ಸೇರಿದ ಮನೆ ಮತ್ತು ಕೊಟ್ಟಿಗೆ ಪರಿಸರವನ್ನು ಜಪ್ತಿ ಮಾಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದ ಮುಂದಿನ ಕಾನೂನು ಪ್ರಕ್ರಿಯೆಗಳು ನಡೆಯಲಿವೆ.