ಸುಳ್ಯ: ಈಶ್ವರಮಂಗಲದಲ್ಲಿ ಪಿಕ್‌ಅಪ್ ವಾಹನ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಸುಳ್ಯ ತಾಲೂಕಿನ ಕೊಡಿಯಾಲ ಗ್ರಾಮದ ಬೇರಿ ನಿವಾಸಿ ಸುದೇಶ್ (21) ಮೃತಪಟ್ಟಿದ್ದಾರೆ.
ಕೊಡಿಯಾಲ ಗ್ರಾಮದ ಪೊಡಿಯ ಮತ್ತು ವಿಮಲ ದಂಪತಿಯ ಪುತ್ರ ಸುದೇಶ್ ಅವರು ಕೆಲಸಕ್ಕೆ ಹೋಗುತ್ತಿದ್ದ ಸಂದರ್ಭದಲ್ಲಿ ಈ ಅಪಘಾತ ಸಂಭವಿಸಿತ್ತು. ಪಿಕ್‌ಅಪ್ ವಾಹನಕ್ಕೆ ಬೈಕ್ ಡಿಕ್ಕಿಯಾದ ಪರಿಣಾಮ ಸುದೇಶ್ ಅವರ ತಲೆಗೆ ಗಂಭೀರ ಗಾಯಗಳಾಗಿದ್ದವು.
ಅಪಘಾತದ ಬಳಿಕ ಗಾಯಾಳುವನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಚಿಕಿತ್ಸೆ ಮುಂದುವರಿದಿದ್ದರೂ ಅವರ ಜೀವ ಉಳಿಸಲು ಸಾಧ್ಯವಾಗಲಿಲ್ಲ. ಇಂದು ಚಿಕಿತ್ಸೆ ಫಲಕಾರಿಯಾಗದೆ ಸುದೇಶ್ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.





