16 October 2026 |

ಶಾಲಾ ಮಕ್ಕಳನ್ನು ಸಾಗಿಸುವ ಖಾಸಗಿ ವಾಹನಗಳ ವಿರುದ್ಧ ಸಾರಿಗೆ ಇಲಾಖೆಯ ಕ್ರಮ; 30 ವಾಹನಗಳ ಮೇಲೆ ಪ್ರಕರಣ ದಾಖಲು!

  • 15 Oct 2026 09:49:43 AM

ಮಂಗಳೂರು: ಶಾಲಾ ಮಕ್ಕಳ ಪ್ರಯಾಣವನ್ನು ಸುರಕ್ಷಿತಗೊಳಿಸುವ ಉದ್ದೇಶದಿಂದ ಮಂಗಳೂರು ಪ್ರಾದೇಶಿಕ ಸಾರಿಗೆ ಇಲಾಖೆಯ ಅಧಿಕಾರಿಗಳು ವಿಶೇಷ ತಪಾಸಣಾ ಕಾರ್ಯಾಚರಣೆ ನಡೆಸಿದ್ದಾರೆ. ನಿಯಮಗಳನ್ನು ಉಲ್ಲಂಘಿಸಿ ಖಾಸಗಿ ವಾಹನಗಳಲ್ಲಿ ಮಕ್ಕಳನ್ನು ಸಾಗಿಸುತ್ತಿದ್ದ ವಾಹನಗಳನ್ನು ಪರಿಶೀಲಿಸಿ, ಅವುಗಳ ವಿರುದ್ಧ ಪ್ರಕರಣಗಳನ್ನು ದಾಖಲಿಸಲಾಗಿದೆ.

 

ಈ ಕಾರ್ಯಾಚರಣೆಯಲ್ಲಿ ಸುಮಾರು 30 ವಾಹನಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ಸಂಬಂಧಪಟ್ಟ ವಾಹನ ಮಾಲೀಕರಿಗೆ ನೋಟಿಸ್‌ಗಳನ್ನು ನೀಡಲಾಗಿದೆ.

 

ಮಕ್ಕಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಇಂತಹ ತಪಾಸಣೆಗಳನ್ನು ಮುಂದಿನ ದಿನಗಳಲ್ಲಿಯೂ ನಿರಂತರವಾಗಿ ನಡೆಸಲಾಗುವುದು ಎಂದು ಮಂಗಳೂರು ಉಪ ಸಾರಿಗೆ ಆಯುಕ್ತರು ಹಾಗೂ ಹಿರಿಯ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ತಿಳಿಸಿದ್ದಾರೆ.