ಮಂಗಳೂರು: ನಗರದ ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL) ಕಾರ್ಖಾನೆಯಲ್ಲಿ ಸೆಪ್ಟೆಂಬರ್ 30ರಂದು ಸಂಭವಿಸಿದ್ದ ಸ್ಫೋಟ ದುರಂತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಗುತ್ತಿಗೆ ಕಾರ್ಮಿಕ ರಾಜೇಶ್ ಡಿಸಿಲ್ವ ಮೃತಪಟ್ಟಿದ್ದಾರೆ.
ಸ್ಫೋಟದ ಬಳಿಕ ತೀವ್ರ ಗಾಯಗಳೊಂದಿಗೆ ಆಸ್ಪತ್ರೆಗೆ ದಾಖಲಿಸಲಾಗಿದ್ದ ರಾಜೇಶ್ ಡಿಸಿಲ್ವ ಅವರಿಗೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ವೈದ್ಯರ ನಿರಂತರ ಪ್ರಯತ್ನಗಳ ಹೊರತಾಗಿಯೂ ಚಿಕಿತ್ಸೆ ಫಲಕಾರಿಯಾಗದೆ ಶನಿವಾರ ಬೆಳಗ್ಗೆ ಅವರು ಕೊನೆಯುಸಿರೆಳೆದಿದ್ದಾರೆ.
ಈ ಘಟನೆಯಿಂದ MRPL ಸ್ಫೋಟ ಪ್ರಕರಣದಲ್ಲಿ ಗಾಯಗೊಂಡಿದ್ದ ಕಾರ್ಮಿಕರ ಪೈಕಿ ಮತ್ತೊಬ್ಬರು ಮೃತಪಟ್ಟಂತಾಗಿದೆ.





