23 October 2026 |

ದಕ್ಷಿಣ ಕನ್ನಡ ಜಿಲ್ಲೆಯ ಮರುನಾಮಕರಣಕ್ಕೆ ವಿರೋಧ; ಹಳೆಯ ಹೆಸರನ್ನೇ ಉಳಿಸಲು ಸಿಪಿಐ ಆಗ್ರಹ!

  • 23 Oct 2026 11:23:30 AM

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಗೆ ‘ಮಂಗಳೂರು ಜಿಲ್ಲೆ’ ಎಂದು ಮರುನಾಮಕರಣ ಮಾಡುವ ಪ್ರಸ್ತಾಪಕ್ಕೆ ವಿರೋಧ ವ್ಯಕ್ತವಾಗಿದೆ. ಭಾರತೀಯ ಕಮ್ಯುನಿಸ್ಟ್ ಪಕ್ಷದ (ಸಿಪಿಐ) ಮಂಗಳೂರು ತಾಲೂಕು ಸಮಿತಿಯು ಈ ಕುರಿತು ಮುಖ್ಯಮಂತ್ರಿ ಅವರಿಗೆ ಪತ್ರ ಬರೆದು, ಜಿಲ್ಲೆಯ ಪ್ರಸ್ತುತ ಹೆಸರನ್ನು ಮುಂದುವರಿಸುವಂತೆ ಮನವಿ ಮಾಡಿದೆ.

 

ದಕ್ಷಿಣ ಕನ್ನಡ ಜಿಲ್ಲೆಗೆ ತನ್ನದೇ ಆದ ಐತಿಹಾಸಿಕ ಹಿನ್ನೆಲೆ ಮತ್ತು ಸಾಂಸ್ಕೃತಿಕ ಪರಂಪರೆ ಇರುವುದರಿಂದ, ಹೆಸರನ್ನು ಬದಲಿಸುವ ಮೊದಲು ಈ ಅಂಶಗಳನ್ನು ಗಮನದಲ್ಲಿಟ್ಟುಕೊಳ್ಳಬೇಕು ಎಂದು ಸಮಿತಿ ಒತ್ತಾಯಿಸಿದೆ.
 

ಜಿಲ್ಲೆಗೆ ಹೊಸ ಹೆಸರು ನೀಡುವ ಪ್ರಸ್ತಾಪದ ಕುರಿತು ಚರ್ಚೆ ನಡೆಯುತ್ತಿರುವ ನಡುವೆಯೇ ಸಿಪಿಐ ಸಮಿತಿಯ ಈ ನಿಲುವು ಗಮನ ಸೆಳೆದಿದೆ. ಮರುನಾಮಕರಣದ ಕುರಿತು ಸರ್ಕಾರದ ಅಂತಿಮ ನಿರ್ಧಾರ ಇನ್ನಷ್ಟೇ ಸ್ಪಷ್ಟವಾಗಬೇಕಿದೆ.