ಉಳ್ಳಾಲ: ನೇತ್ರಾವತಿ ನದಿ ತೀರದ ಕೋಟೆಪುರ ಕೋಡಿಯ ಕುದುರು ಪ್ರದೇಶದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.
ಶುಕ್ರವಾರ ಸಂಜೆ ಮೃತದೇಹ ಪತ್ತೆಯಾಗಿರುವ ಬಗ್ಗೆ ಮಾಹಿತಿ ತಿಳಿದ ಉಳ್ಳಾಲ ಪೊಲೀಸರು ತಕ್ಷಣ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಕಳುಹಿಸಲಾಗಿದೆ.
ಮೃತ ವ್ಯಕ್ತಿಯ ಗುರುತು ಇನ್ನೂ ಪತ್ತೆಯಾಗಿಲ್ಲ. ಸಾವಿಗೆ ನಿಖರವಾದ ಕಾರಣವೂ ತಿಳಿದುಬಂದಿಲ್ಲ. ಈ ಕುರಿತು ಉಳ್ಳಾಲ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.





