25 October 2026 |

ಮಂಗಳೂರಿನಲ್ಲಿ ಆಹಾರ ಉತ್ಪಾದನಾ ಘಟಕದ ಮೇಲೆ ಅಧಿಕಾರಿಗಳ ದಾಳಿ: ಹಲ್ವಾ, ಖರ್ಜೂರ ಉತ್ಪನ್ನ ವಶಕ್ಕೆ

  • 25 Oct 2026 12:44:23 AM

ಮಂಗಳೂರು: ಕದ್ರಿ ದೇವಸ್ಥಾನದ ಸಮೀಪವಿರುವ ಆಹಾರ ಉತ್ಪಾದನಾ ಘಟಕದ ಮೇಲೆ ಅಕ್ಟೋಬರ್ 24ರಂದು ಆಹಾರ ಸುರಕ್ಷತಾ ಅಧಿಕಾರಿಗಳು ದಿಢೀರ್ ತಪಾಸಣೆ ನಡೆಸಿದ್ದಾರೆ.

 

ಈ ವೇಳೆ ಘಟಕದಲ್ಲಿ ಸ್ವಚ್ಛತೆಯ ಕೊರತೆ ಕಂಡುಬಂದ ಹಿನ್ನೆಲೆಯಲ್ಲಿ ಹಲ್ವಾ ಹಾಗೂ ಖರ್ಜೂರದಿಂದ ತಯಾರಿಸಿದ ಆಹಾರ ಉತ್ಪನ್ನಗಳನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಮಾದರಿಗಳನ್ನು ಹೆಚ್ಚಿನ ಪರಿಶೀಲನೆಗಾಗಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.

 

ಘಟಕದಲ್ಲಿ ಅಗತ್ಯ ಸ್ವಚ್ಛತಾ ಕ್ರಮಗಳನ್ನು ಕೈಗೊಂಡು ಅವುಗಳನ್ನು ಪೂರ್ಣಗೊಳಿಸುವವರೆಗೆ ಉತ್ಪಾದನೆಯನ್ನು ಪುನರಾರಂಭಿಸದಂತೆ ಅಧಿಕಾರಿಗಳು ಸೂಚಿಸಿದ್ದಾರೆ.