04 November 2026 |

ದ್ವಿಚಕ್ರ ವಾಹನ ಕಳವು ಪ್ರಕರಣ ಭೇದಿಸಿದ ಪೊಲೀಸರು – 7 ಮಂದಿ ವಶಕ್ಕೆ, ₹4.50 ಲಕ್ಷ ಮೌಲ್ಯದ ವಾಹನಗಳ ಜಪ್ತಿ

  • 25 Oct 2026 04:10:54 PM

ಮಂಗಳೂರು: ನಗರದಲ್ಲಿ ನಡೆದ ದ್ವಿಚಕ್ರ ವಾಹನ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಏಳು ಮಂದಿಯನ್ನು ವಶಕ್ಕೆ ಪಡೆದಿದ್ದಾರೆ. ವಶಕ್ಕೆ ಪಡೆದವರಲ್ಲಿ ಕಾನೂನಿನೊಂದಿಗೆ ಸಂಘರ್ಷಕ್ಕೊಳಗಾದ ಮೂವರು ಬಾಲಕರು ಸೇರಿದ್ದಾರೆ ಎಂದು ತಿಳಿದುಬಂದಿದೆ.

 

ಪ್ರಕರಣದ ತನಿಖೆ ನಡೆಸಿದ ಪೊಲೀಸರು ಕಳವು ಮಾಡಲಾಗಿದ್ದ ಆರು ದ್ವಿಚಕ್ರ ವಾಹನಗಳನ್ನು ಪತ್ತೆಹಚ್ಚಿದ್ದಾರೆ. ಅಲ್ಲದೆ, ಕಳವು ಕೃತ್ಯಕ್ಕೆ ಬಳಸಲಾಗಿದ್ದ ಮೂರು ದ್ವಿಚಕ್ರ ವಾಹನಗಳನ್ನೂ ವಶಪಡಿಸಿಕೊಂಡಿದ್ದಾರೆ. ಹೀಗೆ ಒಟ್ಟು ಒಂಬತ್ತು ವಾಹನಗಳನ್ನು ಪೊಲೀಸರು ಜಪ್ತಿ ಮಾಡಿದ್ದು, ಅವುಗಳ ಅಂದಾಜು ಮೌಲ್ಯ ₹4.50 ಲಕ್ಷ ಎಂದು ತಿಳಿಸಿದ್ದಾರೆ.