ವಿಟ್ಲ: ನಗರ ಸಮೀಪದ ನೆತ್ರಕೆರೆಯಲ್ಲಿ ಯಮುನ (55) ಎಂಬವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ.
ಮಾಹಿತಿಯ ಪ್ರಕಾರ, ಕೆಲವು ವರ್ಷಗಳ ಹಿಂದೆ ಯಮುನ ಅವರ ಪುತ್ರ ಕೂಡ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು.
ಇದೀಗ ಯಮುನ ಅವರ ಸಾವಿಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಅವರು ಜೀವನದಲ್ಲಿ ಜಿಗುಪ್ಸೆಗೊಂಡು ಈ ನಿರ್ಧಾರ ಕೈಗೊಂಡಿದ್ದಾರೆ ಎಂದು ಪ್ರಾಥಮಿಕ ಮಾಹಿತಿ ತಿಳಿಸಿದೆ.





