ಮಂಗಳೂರು: ನಗರದಲ್ಲಿ ಕಾನೂನುಬದ್ಧವಾಗಿ ಮಾಂಸ ಸಾಗಣೆ ಮಾಡುವ ವಾಹನಗಳನ್ನು ತಡೆದು ಅನಗತ್ಯವಾಗಿ ಅಡ್ಡಿಪಡಿಸುವ ವ್ಯಕ್ತಿಗಳು ಹಾಗೂ ಗುಂಪುಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಮಂಗಳೂರು ನಗರ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.
ಮಾಂಸ ಸಾಗಣೆ ವಾಹನಗಳ ಬಗ್ಗೆ ಯಾವುದೇ ಅನುಮಾನಗಳಿದ್ದರೆ, ಸಾರ್ವಜನಿಕರು ಸ್ವತಃ ವಾಹನಗಳನ್ನು ತಡೆದು ಪರಿಶೀಲನೆ ನಡೆಸುವ ಬದಲು ಪೊಲೀಸರಿಗೆ ಮಾಹಿತಿ ನೀಡಬೇಕು ಎಂದು ಸೂಚಿಸಲಾಗಿದೆ.
ಕಾನೂನನ್ನು ಕೈಗೆತ್ತಿಕೊಳ್ಳುವುದು ಅಥವಾ ವಾಹನಗಳ ಸಂಚಾರಕ್ಕೆ ಅಡ್ಡಿಪಡಿಸುವುದನ್ನು ಸಹಿಸಲಾಗುವುದಿಲ್ಲ ಎಂಬ ಸಂದೇಶವನ್ನು ಪೊಲೀಸರು ನೀಡಿದ್ದಾರೆ.





